ಇತ್ತೀಚಿನ ಸುದ್ದಿ
ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: ಚಿಕ್ಕಮಗಳೂರಿನಲ್ಲಿ ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ
10/03/2024, 19:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಖಂಡಿಸಿ
ಹಿಂದೂಪರ ಸಂಘಟನೆಗಳಿಂದ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಯಿತು.
ಭಯೋತ್ಪಾಕ ಕೃತ್ಯಗಳನ್ನು ಖಂಡಿಸಿ ಹೋರಾಟ, ಸರ್ಕಾರದ ವಿರುದ್ಧ ಕಿಡಿ ಕಾರಲಾಯಿತು.
ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಸರ್ಕಲ್ ವರೆಗೆ ಪ್ರತಿಭಟನಾಕಾರರು ಮೆರವಣಿಗೆ ನಡೆಸಿದರು.
ವಿವಿಧ ಹಿಂದೂ ಪರ ಸಂಘಟನೆ, ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.ಕಾಂಗ್ರೆಸ್ ಸರ್ಕಾರ ವಿರುದ್ದವೂ ಘೋಷಣೆ ಕೂಗಲಾಯಿತು.