12:46 AM Wednesday4 - December 2024
ಬ್ರೇಕಿಂಗ್ ನ್ಯೂಸ್
ದತ್ತ ಜಯಂತಿ ಹಿನ್ನೆಲೆ: ಡಿ.11ರಿಂದ 14 ವರೆಗೆ ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ ಪ್ರವೇಶಕ್ಕೆ… ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ 3 ದಶಕಗಳ ಮೆರುಗು: ಡಿ.10ರಿಂದ 15ರ ವರೆಗೆ ಆಳ್ವಾಸ್… ಕೇರಳದಲ್ಲಿ ಭೀಕರ ರಸ್ತೆ ಅಪಘಾತ: 5 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ದಾರುಣ ಸಾವು ಫೆಂಗಲ್ ಎಫೆಕ್ಟ್: ಬೆಂಗಳೂರಿನಲ್ಲಿ ಸಾಧಾರಣ ಮಳೆ; ಎಂದಿನಂತೆ ತೆರೆದುಕೊಂಡ ಶಾಲಾ- ಕಾಲೇಜು ಕೂಡ್ಲಿಗಿ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ; ಸಾಮಗ್ರಿ ಜಪ್ತಿ ಮಲೆನಾಡಲ್ಲಿ ಫೆಂಗಲ್ ಅಬ್ಬರ: ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ; ಕಾಫಿ ಬೆಳೆಗಾರರು ಕಂಗಾಲು ತುಮಕೂರು: ಭೀಕರ ರಸ್ತೆ ಅಪಘಾತ; 3 ಮಂದಿ ಮಹಿಳೆಯರ ದಾರುಣ ಸಾವು ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಮುಖ್ಯಮಂತ್ರಿ ಮೆಚ್ಚುಗೆ ಫೆಂಗಲ್ ಚಂಡಮಾರುತ: ದ.ಕ., ಉಡುಪಿ ಜಿಲ್ಲೆಯ ಶಾಲೆ ಹಾಗೂ ಪಿಯು ಕಾಲೇಜಿಗಳಿಗೆ ನಾಳೆ… ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ವೈಭವದ ಲಕ್ಷದೀಪೋತ್ಸವ ಸಂಪನ್ನ: ದಾಖಲೆ ಸಂಖ್ಯೆಯಲ್ಲಿ ನೆರೆದ…

ಇತ್ತೀಚಿನ ಸುದ್ದಿ

ರಣಮಂಗಲ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸೇವೆ ಸಲ್ಲಿಸಿದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

06/05/2024, 21:28

ಪುತ್ತೂರು(reporterkarnataka.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಸೋಮವಾರ ಸಂಜೆ ರಣಮಂಗಲ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಸೇವೆ ಸಲ್ಲಿಸಿದರು.

ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಬೊಳಿಲ್ಲಾಯ ಕಡಮ್ಮಾಜೆ ಪ್ರಾರ್ಥನೆ ಸಲ್ಲಿಸಿದರು.
ದೇವಸ್ಥಾನಕ್ಕೆ ಭೇಟಿ ನೀಡುವ ಮೊದಲು ಆರ್ಲಪದವು ಕಿನ್ನಿಮಾಣಿ – ಪೂಮಾಣಿ ದೈವಸ್ಥಾನಕ್ಕೆ ಭೇಟಿ ನೀಡಿದರು.
ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಪಾಣಾಜೆ, ಬಂಟ್ವಾಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ವಲಯ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ ರೈ ಕೆದಂಬಾಡಿ, ಪಾಣಾಜೆ ಗ್ರಾಪಂ ಸದಸ್ಯ ನಾರಾಯಣ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು