ಇತ್ತೀಚಿನ ಸುದ್ದಿ
ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ವಾಹನಗಳ ಅಡ್ಡಾದಿಡ್ಡಿ ಪಾರ್ಕಿಂಗ್ : ಜನಸಾಮಾನ್ಯರಿಗೆ ತೊಂದರೆ..! ಆಡಳಿತ ತಕ್ಷಣ ಎಚ್ಚೆತ್ತುಕೊಳ್ಳಲಿ
01/08/2025, 12:29

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ತೀರ್ಥಹಳ್ಳಿ ತಾಲೂಕು ಕಚೇರಿ ಆವರಣದಲ್ಲಿ ಅಡ್ಡಾದಿಡ್ಡಿ ವಾಹನಗಳನ್ನು ಪಾರ್ಕಿಂಗ್ ಮಾಡಿ ತಾಲೂಕು ಕಚೇರಿಗೆ ಬರುವ ಜನಸಾಮಾನ್ಯರಿಗೆ ಮತ್ತು ವಾಹನಗಳಿಗೆ ತೊಂದರೆಯಾಗುತ್ತಿದೆ ಎಂದು ಅನೇಕ ಸಾರ್ವಜನಿಕರು ದೂರಿದ್ದಾರೆ.
ತಾಲೂಕು ಕಚೇರಿಗೆ ನಿತ್ಯ ತಮ್ಮ ದೈನಂದಿನ ಕೆಲಸಗಳಿಗಾಗಿ ಬಂದಿರುವ ಜನಸಾಮಾನ್ಯರಿಗೆ ಓಡಾಡಲು ಕೂಡ ತೊಂದರೆಯಾಗುವ ರೀತಿಯಲ್ಲಿ ಕೆಲವು ಜನರು ವಾಹನ ತಂದು ಪಾರ್ಕಿಂಗ್‌ನಲ್ಲಿ ಅಡ್ಡಾದಿಡ್ಡಿ ನಿಲುಗಡೆ ಮಾಡುತ್ತಾರೆ. ತಾಲೂಕು ಕಚೇರಿ ಆವರಣದಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿ ಇತ್ತ ಶಿವಮೊಗ್ಗ, ಉಡುಪಿ, ಮಂಗಳೂರಿಗೆ ಬಸ್ ಹತ್ತಿ ಹೊಗುತ್ತಿರುವ ದೂರು ಕೇಳಿ ಬಂದಿದೆ. ಪಟ್ಟಣದ ರಸ್ತೆ ಅಕ್ಕ ಪಕ್ಕ ವಾಹನಗಳನ್ನು ಪಾರ್ಕಿಂಗ್ ಮಾಡಿದಂತೆ ತಾಲೂಕು ಕಚೇರಿ ಆವರಣದಲ್ಲಿ ಪಾರ್ಕಿಂಗ್ ಮಾಡಿ ಬೇರೆ ಕಡೆ ಹೋಗುತ್ತಾರೆ. ಇದರಿಂದ ತಾಲೂಕು ಕಚೇರಿಗೆ ಬರುವ ಇತರೆ ವಾಹನಗಳಿಗೆ ತೊಂದರೆಯಾಗುತ್ತಿದೆ.
ಪೊಲೀಸರು ಕೂಡ ಅಡ್ಡಾದಿಡ್ಡಿ ವಾಹನ ನಿಲ್ಲಿಸುವವರಿಗೆ ದಂಡದ ಬಿಸಿ ಮುಟ್ಟಿಸಬೇಕಿದೆ ಎಂಬ ಮಾತು ಕೂಡ ಸಾರ್ವಜನಿಕರಿಂದ ಕೇಳಿಬರುತ್ತಿದೆ.
ಈ ರೀತಿ ಅಡ್ಡಾದಿಡ್ಡಿ ನಿಲ್ಲಿಸುವ ವಾಹನಗಳಿಂದ ಪ್ರತಿನಿತ್ಯವೂ ಟ್ರಾಫಿಕ್ ಜಾಮ್ ಆಗುತ್ತಿದ್ದು ಈ ಸಮಸ್ಯೆಯನ್ನು ಬಗೆಹರಿಸಲು ವಾಹನಗಳ ಪಾರ್ಕಿಂಗ್ ಬಗ್ಗೆ ತಾಲೂಕು ಆಡಳಿತ ಗಮನ ಹರಿಸಿ ಓರ್ವ ಸೆಕ್ಯೂರಿಟಿ ಗಾರ್ಡ್ ನೇಮಿಸುವಂತೆ ತಾಲೂಕ ಕಚೇರಿ ಬಂದು ತಮ್ಮ ಕಚೇರಿಯ ಕೆಲಸ ಮುಗಿಸಿ ತಮ್ಮ ವಾಹನವನ್ನು ತೆಗೆಯಲಾಗದೆ ಗಂಟೆಗಟ್ಟಲೆ ಕಾದು ಕಾದು ನೊಂದ ಸಾರ್ವಜನಿಕರು ಆಗ್ರಹಿಸಿದ್ದಾರೆ.