ಇತ್ತೀಚಿನ ಸುದ್ದಿ
ರಾಣೆಬೆನ್ನೂರು: ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ 10ನೇ ಪುಣ್ಯಾರಾಧನೆ: ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮಸಭೆ
11/11/2025, 12:34
ರಾಣೆಬೆನ್ನೂರು(reporterkarnataka.com): ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ದೇವಗೊಂಡನಕಟ್ಟಿ ಗ್ರಾಮದಲ್ಲಿ ಶಿವಾಚಾರ್ಯ ರತ್ನ ಲಿಂಗೈಕ್ಯ ಶ್ರೀ ಷ.ಬ್ರ ಒಡೆಯರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರ 10 ನೇಯ ವರ್ಷದ ಪುಣ್ಯಾರಾಧನೆ ನಡೆಯಿತು.




ಈ ಪ್ರಯುಕ್ತ ಶ್ರೀ ಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು,ಬಾಳೆಹೊನ್ನೂರು ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ರಾಷ್ಟ್ರೀಯ ಭಾವೈಕ್ಯತೆ ಜನಜಾಗೃತಿ ಧರ್ಮಸಭೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ – ಗದಗ ಸಂಸದ ಬಸವರಾಜ ಬೊಮ್ಮಾಯಿ ಉದ್ಘಾಟಿದರು. ಮಾಜಿ ಶಾಸಕರಾದ ಶ್ರೀ ಅರುಣಕುಮಾರ ಪೂಜಾರ ಸೇರಿದಂತೆ ಗ್ರಾಮದ ಹಿರಿಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.












