10:31 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ರಂಗಾಪುರ: ಇದು ಅಂಗನವಾಡಿ ಕಟ್ಟಡ ನಾ? ಅಥವಾ ಸಾರ್ವಜನಿಕ ಶೌಚಾಲಯ ನಾ?

03/12/2021, 09:58

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ತಾಲೂಕಿನ ರಂಗಾಪುರ ಅಂಗನವಾಡಿ ಕಟ್ಟಡ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಭೂ ಸೇನಾ ನಿಗಮ ಹಾಗೂ ಶಿಶು ಕಲ್ಯಾಣ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ.

ರಂಗಾಫುರ  ಗ್ರಾಮದ ಅಂಗನವಾಡಿ ಕೇಂದ್ರದ ಕಾಮಗಾರಿಯು 2017-18 ರಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿಯಡಿಯಲ್ಲಿ ಆರಂಭವಾಗಿತ್ತು.

30 ಲಕ್ಷ ರೂ. ವೆಚ್ಚದ ಕಾಮಗಾರಿ ಪ್ರಾರಂಭವಾಗಿದ್ದು, ಇನ್ನೂ ಪೂರ್ಣಗೊಳ್ಳದೆ ಅರ್ಧಕ್ಕೆ ನಿಂತು ಹೋಗಿದೆ. ಯಾರೊಬ್ಬ ಅಧಿಕಾರಿಯು ಮಾಹಿತಿ ಕೊಡದೆ ನುಣುಚಿಕೊಳ್ಳುತ್ತಿದ್ದಾರೆ.

ಈ ಅಂಗನವಾಡಿ ನಿರ್ಮಾಣದಲ್ಲಿ ಗುತ್ತಿಗೆ ಪಡೆದ ಗುತ್ತಿಗೆದಾರನಾಗಲಿ, ಅಧಿಕಾರಿಗಳಾಗಲಿ ಯಾರೊಬ್ಬರು ಸಹ ಕಟ್ಟಡ ಕಾಮಗಾರಿ ಪೂರ್ಣಮಾಡುವ ಕೆಲಸಕ್ಕೆ ಕೈ ಹಾಕದೆ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಮೂರು ವರ್ಷಗಳಿಂದ ಕಟ್ಟಡ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಅದನ್ನು ಇದೂವರೆಗೂ ಪೂರ್ಣಗೊಳಿಸದೆ ಇರುವುದನ್ನು ನೋಡಿದರೆ ಸ್ಥಳೀಯ ಪಂಚಾಯತಿ ಅಧಿಕಾರಿ ಹಾಗೂ ಶಿಶು ಕಲ್ಯಾಣ ಇಲಾಖೆಯ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತದೆ. ಮೂರು ವರ್ಷಗಳಿಂದ ಈ ಕಾಮಗಾರಿ ನನೆಗುದಿಗೆ ಬಿದ್ದಿದ್ದರಿಂದ ಸ್ಥಳೀಯರು ಇದನ್ನು ಕುಡುಕರ ಅಡ್ಡೆ ಮತ್ತು ಮೂತ್ರ ವಿಸರ್ಜನೆಗೆ ಬಳಕೆ ಮಾಡುತ್ತಿದ್ದಾರೆ. ಇದರಿಂದ ಕಟ್ಟಡದ ಸುತ್ತಲೂ ದುರ್ಗಂಧ ವಾಸನೆ ನಾರುತ್ತಿದ್ದು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅಂಗನವಾಡಿ ಕಟ್ಟಡದ ಕಾಮಗಾರಿ ಕೆಲಸ ಮೂರು ವರ್ಷಗಳಿಂದ ನಿಂತು ಹೋಗಿದೆ. ಸಂಬಂಧಿಸಿದ ಯಾರೊಬ್ಬರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಸ್ಥಳೀಯರು ಇದನ್ನು ಕುಡುಕರ ತಾಣವಾಗಿ ಮತ್ತು  ಮಲಮೂತ್ರ ವಿಸರ್ಜನೆಗೆ ಉಪಯೋಗಿಸುತ್ತಿದ್ದು ಕಟ್ಟಡ ಮತ್ತೆ ಶಿಥಿಲಾವಸ್ಥೆ ತಲುಪುತ್ತಿದೆ. ಈ ಅಂಗನವಾಡಿ ಕೇಂದ್ರಕ್ಕೆ ಹೇಳೋರು ಕೇಳೋರು ಯಾರು ಇಲ್ಲದಂತಾಗಿದೆ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಲ್ಲಿಸಿದ್ದು ಬಾಲ ಮಕ್ಕಳ ಜೊತೆ ಚೆಲ್ಲಾಟ

ಆಡುತ್ತಿದ್ದಾರೆ. ಸಂಬಂಧಪಟ್ಟವರ ಬೇಜವಾಬ್ದಾರಿಯಿಂದ ಸದ್ಯಕ್ಕೆ ಇದು ಕುಡುಕರ ಅಡ್ಡೆ ಮತ್ತು ಮಲಮೂತ್ರಾಲಯ ತಾಣವಾಗಿದೆ.

ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಅಂಗನವಾಡಿ ಕಟ್ಟಡ ಕಾಮಗಾರಿಗೆ ಮರುಜೀವ ಕೊಡುವರೆ ಎಂದು ಕಾದು ನೋಡಬೇಕು.

3  ವರ್ಷಗಳಿಂದ ಈ ಕಾಮಗಾರಿ ನನೆಗುದಿಗೆ ಬಿದ್ದಿದ್ದರಿಂದ ಸ್ಥಳೀಯರು ಇದನ್ನು ಮೂತ್ರ ವಿಸರ್ಜನೆಗೆ ಬಳಕೆ ಮಾಡಿದ್ದಾರೆ. ಇದರಿಂದ ಕಟ್ಟಡದ ಸುತ್ತಲೂ ದುರ್ವಾಸನೆ ಬರುತ್ತದೆ.

ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಒದಗಿದೆ. ಪಕ್ಕದಲ್ಲಿ ಸರಕಾರಿ ಶಾಲೆ ಇದ್ದು ಮಕ್ಕಳಿಗೆ ತೀವ್ರ ತೊಂದರೆಯಾಗುತ್ತಿದೆ.

                

ರಂಗಾಪುರ ಅಂಗನವಾಡಿ ಕಟ್ಟಡ ಕಳಪೆ ಮಟ್ಟದಿಂದ ಕೂಡಿದೆ. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ತಪ್ಪಿಸ್ಥರ ವಿರುದ್ಧ ಕಮ ಕೈಗೊಳ್ಳಬೇಕು 15 ದಿನ ಕಾಲಾವಕಾಶ ನೀಡಲಾಗುತ್ತಿದೆ. ಇಲ್ಲವಾದರೆ ಉಗ್ರ ಹೋರಾಟ ಮಾಡಲಾಗುವುದು.

ಸುರೇಶ್ ಕಟ್ಟಿಮನಿ, ಜಿಲ್ಲಾಧ್ಯಕ್ಷ, ಕಸ್ತೂರಿ ಕರ್ನಾಟಕ ರಕ್ಷಣಾ ಜನಪರ ವೇದಿಕೆ 

ಇತ್ತೀಚಿನ ಸುದ್ದಿ

ಜಾಹೀರಾತು