ಇತ್ತೀಚಿನ ಸುದ್ದಿ
ಆರದಿರಲಿ ಬದುಕು ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ಗೆ ರಾಣಿ ಅಬ್ಬಕ್ಕ ಪ್ರಶಸ್ತಿ: ಜ.18ರಂದು ಪ್ರದಾನ
14/01/2026, 22:28
ಮಂಗಳೂರು(reporterkarnataka.com): ತುಳುನಾಡಿನ ಅಪ್ರತಿಮ ಹೋರಾಟಗಾರ್ತಿ ಚೌಟ ರಾಣಿ ಅಬ್ಬಕ್ಕ ಅವರ 500ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಜವನೆರ್ ಬೆದ್ರ ತಂಡ ನೀಡುವ ರಾಣಿ ಅಬ್ಬಕ್ಕ ಪ್ರಶಸ್ತಿಗೆ ಆರದಿರಲಿ ಬದುಕು ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ ಅವರು ಆಯ್ಕೆಯಾಗಿದ್ದಾರೆ.
ಜನವರಿ 18ರಂದು ಮಧ್ಯಾಹ್ನ 3.45ಕ್ಕೆ ಚೌಟ ರಾಣಿ ಅಬ್ಬಕ್ಕ ಪ್ರೇರಣಾ ಪತ್ರ ನೀಡಿ ಅವರನ್ನು ಗೌರವಿಸಲಾಗುವುದು.
ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಮೂಲಕ ಪದ್ಮಶ್ರೀ ಭಟ್ ಅವರು ಕಳೆದ 8 ವರ್ಷಗಳಿಂದ ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಹಸ್ತ ನೀಡುತ್ತಾ ಬಂದಿದ್ದಾರೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ನಿರ್ದೇಶಕಿಯೂ ಆಗಿರುವ ಅವರು ನೂರಾರು ಬಹುಮುಖ ಪ್ರತಿಭೆಯ ಮಕ್ಕಳನ್ನು ಸಮಾಜಕ್ಕೆ ಪರಿಚಯಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ಮೂಲಕ ರಾಜ್ಯದ ಹಲವು ಕಡೆಗಳಲ್ಲಿ ರಾಜ್ಯಮಟ್ಟದ ಮಕ್ಕಳ ಮೇಳ ನಡೆಸಿದ್ದಾರೆ. ಮೂಲತಃ ಪತ್ರಕರ್ತೆಯಾದ ಪದ್ಮಶ್ರೀ ಭಟ್ ಅವರು ಸಾಮಾಜಿಕ ಕಾರ್ಯಕರ್ತೆಯೂ ಹೌದು.













