ಇತ್ತೀಚಿನ ಸುದ್ದಿ
ಅತ್ಯಾಚಾರ ಪ್ರಕರಣವನ್ನು ಎನ್ಐಎಗೆ ನೀಡಿ: ಬಿಜೆಪಿ ಮಹಿಳಾ ಮೋರ್ಚಾ
25/08/2024, 00:06
ಕಾರ್ಕಳ(reporterkarnataka.com): ಅಮಾಯಕ ಯುವತಿಯ ಅತ್ಯಾಚಾರ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಗೆ ಒಪ್ಪಿಸಬೇಕು ಎಂದು ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹಿಸಿದೆ.
ಪೋಲಿಸ್ ಇಲಾಖೆ ಮೊದಲೇ ಎಚ್ಚೆತ್ತುಕೊಳ್ಳುತ್ತಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ. ಇನ್ನಾದರೂ ಪೊಲೀಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಹುಡುಗಿಗೆ ನ್ಯಾಯ ಒದಗಿಸಬೇಕು ಹಾಗೂ ಹುಡುಗಿ ಮೇಲೆ ಸರಣಿ ಅತ್ಯಾಚಾರ ನಡೆದಿರುವ ಸಾಧ್ಯತೆಯಿದ್ದು, ಇಂತಹ ಹೇಯ ಕೃತ್ಯ ನಡೆಸಿರುವವರನ್ನು ತಕ್ಷಣವೇ ಬಂಧಿಸಬೇಕು. ಇಲ್ಲವಾದಲ್ಲಿ ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಉಗ್ರ ಪ್ರತಿಭಟನೆ ಮಾಡಲಿದೆ ಎಂದು ಎಚ್ಚರಿಸಿದ್ದಾರೆ.