3:59 PM Tuesday4 - November 2025
ಬ್ರೇಕಿಂಗ್ ನ್ಯೂಸ್
40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:…

ಇತ್ತೀಚಿನ ಸುದ್ದಿ

ಅತ್ಯಾಚಾರ ಪ್ರಕರಣ | ಪ್ರಜ್ವಲ್ ರೇವಣ್ಣ ದೋಷಿ: ಕೋರ್ಟ್ ತೀರ್ಪು; ಕಣ್ಣೀರಿಟ್ಟ ಮಾಜಿ ಸಂಸದ

01/08/2025, 17:39

ಬೆಂಗಳೂರು(reporterkarnataka.com): ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ನಾಳೆ ಪ್ರಕಟಿಸಲಿದೆ.
ಪ್ರಜ್ವಲ್ ರೇವಣ್ಣ ತನ್ನ ಕೆ.ಆರ್.ನಗರದ ಮನೆಯಲ್ಲಿ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ್ದ ಎಂದು ದೂರು ನೀಡಲಾಗಿತ್ತು.
ನ್ಯಾ. ಗಜಾನನ ಭಟ್‌ ಭಟ್‌ ಅವರಿದ್ದ ಪೀಠ ಪ್ರಜ್ವಲ್‌ ದೋಷಿ ಎಂದು ತೀರ್ಪು ನೀಡಿದೆ. ತೀರ್ಪು ಪ್ರಕಟಿಸುವ ವೇಳೆ ಪ್ರಜ್ವಲ್‌ ರೇವಣ್ಣ ಕೂಡ ಕೋರ್ಟ್‌ ಹಾಲ್‌ನಲ್ಲಿ ಹಾಜರಿದ್ದರು. ಶಿಕ್ಷೆಯ ಪ್ರಮಾಣ ಶನಿವಾರ ಪ್ರಕಟವಾಗಲಿದೆ. ಕೋರ್ಟ್‌ ದೋಷಿ ಎಂದು ತೀರ್ಪು ನೀಡುವ ವೇಳೆ ಪ್ರಜ್ವಲ್‌ ರೇವಣ್ಣ ಕಣ್ಣಿರಿಟ್ಟಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು