12:31 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು

ಇತ್ತೀಚಿನ ಸುದ್ದಿ

ರಸಗೊಬ್ಬರ ಹಾಗೂ ಕೀಟನಾಶಕ ಅಂಗಡಿಗಳ ಮೇಲೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ 

23/05/2022, 17:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ವಿವಿಧ ರಸಗೊಬ್ಬರ ಹಾಗೂ ಕೀಟನಾಶಕ ಮಳಿಗೆಗಳಿಗೆ ಸೋಮವಾರ ಕೃಷಿ ಅಧಿಕಾರಿ ವೆಂಕಟೇಶ್ ಎಂ.ಆರ್. ಅವರು ದಿಢೀರ್ ದಾಳಿ ನಡೆಸಿ ರಸಗೊಬ್ಬರ ದಾಸ್ತಾನು, ಅಧಿಕೃತ ಪರವಾನಿಗೆ ಹಾಗೂ ಇನ್ನಿತರ ದಾಖಲಾತಿಗಳನ್ನು ಪರಿಶೀಲನೆ ನಡೆಸಿದರು. 

ವಿವಿಧ ರಸಗೊಬ್ಬರ ಹಾಗೂ ಕೀಟನಾಶಕಗಳ ಮಾದರಿಗಳನ್ನು  ತೆಗೆದು ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಯಿತು ಹಾಗೂ ನಿಯಮ ಪಾಲಿಸದ ರಸಗೊಬ್ಬರ ಮಾರಾಟಗಾರರಿಗೆ ನೋಟಿಸನ್ನು ನೀಡಿ ಮತ್ತೊಮ್ಮೆ ನಿಯಮ ಉಲ್ಲಂಘನೆ ಕಂಡು ಬಂದರೆ ಅಧಿಕೃತ ಪರವಾನಗಿಯನ್ನು ರದ್ದು ಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. 

ತಾಲೂಕಿನಲ್ಲಿ ಮುಂಗಾರು ಹಂಗಾಮು ಇನ್ನೇನು ಪ್ರಾರಂಭವಾಗಲಿದ್ದು, ರೈತರು ಬೆಳೆದ ಬೆಳೆಗಳಿಗೆ ಸೂಕ್ತವಾದ ರಸಗೊಬ್ಬರಗಳ ದಾಸ್ತಾನು ಇದೆ 


ಕಡಿಮೆ ಇರುವ ರಸಗೊಬ್ಬರಗಳನ್ನು ದಾಸ್ತಾನು ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಹಾಗೂ ರೈತರು ಅಧಿಕೃತ ಪರವಾನಗಿ ಹೊಂದಿರುವ ಅಂಗಡಿಗಳಿಂದ ಮಾತ್ರ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಖರೀದಿಸಬೇಕು ಹಾಗೂ ರಸಗೊಬ್ಬರ ಮಾರಾಟ ಗಾರರು ಎಂಆರ್ಪಿ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಬಾರದು ಮಾರಾಟ ಮಾಡಿದರೆ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮವನ್ನು ಕೈಗೊಳ್ಳಲಾಗುವುದು ಹಾಗೂ ರಸಗೊಬ್ಬರವನ್ನು ರೈತರಿಗೆ ವಿತರಿಸುವಾಗ  ಪಿಓಎಸ್ ಮಿಷಿನ ಮುಖಾಂತರ ವಿತರಣೆ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಿಬ್ಬಂದಿ ಪ್ರದೀಪ್ ಹಾಜರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು