10:42 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ | ಕೋಣಂದೂರು ವಸತಿ ನಿಲಯದ ವಿದ್ಯಾರ್ಥಿಗಳ ಅಸ್ವಸ್ಥತೆ: 20 ವಿದ್ಯಾರ್ಥಿಗಳ ಮೆಗಾನ್ ಆಸ್ಪತ್ರೆಗೆ ದಾಖಲು

25/07/2026, 21:47

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಪ್ರತಿಷ್ಠಿತ ಎನ್‌ಆರ್‌ಎಸ್ ವಿದ್ಯಾಸಂಸ್ಥೆಯ ವಸತಿ ವಿದ್ಯಾರ್ಥಿ ನಿಲಯದಲ್ಲಿ ಊಟ ಸೇವಿಸಿದ ಬಳಿಕ ಕೆಲ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ವಿದ್ಯಾರ್ಥಿಗಳಲ್ಲಿ ವಾಂತಿ, ಹೊಟ್ಟೆನೋವು ಸೇರಿದಂತೆ ಸಣ್ಣ ಪ್ರಮಾಣದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮೊದಲು ಕೋಣಂದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಎಲ್ಲ ವಿದ್ಯಾರ್ಥಿಗಳನ್ನು ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ಆಸ್ಪತ್ರೆಗೆ ಕರೆತರಲಾಯಿತು.
ಶ್ರೀ ಜಯಚಾಮರಾಜೇಂದ್ರ ಆಸ್ಪತ್ರೆಯ ವೈದ್ಯರು ತಕ್ಷಣವೇ ಚಿಕಿತ್ಸೆಗೆ ಮುಂದಾಗಿ ವಿದ್ಯಾರ್ಥಿಗಳ ಆರೋಗ್ಯ ಪರಿಶೀಲನೆ ನಡೆಸಿದರು. ಬಳಿಕ ವಿದ್ಯಾರ್ಥಿಗಳ ಪೋಷಕರ ಮನವಿ ಮೇರೆಗೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಸುಮಾರು 20 ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗಾನ್ ಆಸ್ಪತ್ರೆಗೆ ಹೆಚ್ಚಿನ ವೈದ್ಯಕೀಯ ಮೇಲ್ವಿಚಾರಣೆಗಾಗಿ ಕಳುಹಿಸಲಾಯಿತು. ಯಾವುದೇ ವಿದ್ಯಾರ್ಥಿಯ ಆರೋಗ್ಯದಲ್ಲಿ ಗಂಭೀರ ಸಮಸ್ಯೆ ಕಂಡುಬಂದಿಲ್ಲವಾದರೂ, ವೈದ್ಯಾಧಿಕಾರಿಗಳು ಮುನ್ನೆಚ್ಚರಿಕೆಯಾಗಿ ಅವರನ್ನು ಅಬ್ಸರ್ವೇಶನ್‌ನಲ್ಲಿ ಇರಿಸುವ ನಿರ್ಧಾರ ಕೈಗೊಂಡಿದ್ದಾರೆ.


ಘಟನೆಯ ಮಾಹಿತಿ ತಿಳಿದ ತಕ್ಷಣವೇ ಶ್ರೀ ಜಯಚಾಮರಾಜೇಂದ್ರ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಕುರುವಳ್ಳಿ ನಾಗರಾಜ್ ಅವರು ತಮ್ಮ ಸ್ನೇಹಿತರ ಜೊತೆಗೆ ಮಧ್ಯರಾತ್ರಿಯಲ್ಲೇ ಆಸ್ಪತ್ರೆಗೆ ಆಗಮಿಸಿ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದು ಅಗತ್ಯ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.
ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಆಸ್ಪತ್ರೆಯ ಅಂಬುಲೆನ್ಸ್ ಸಿಬ್ಬಂದಿಯೊಂದಿಗೆ ಸಮನ್ವಯ ಸಾಧಿಸಿದ ಅವರು, ಅಗತ್ಯವಿದ್ದಲ್ಲಿ ಬಳಸಲು ಖಾಸಗಿ ಅಂಬುಲೆನ್ಸ್‌ಗಳನ್ನೂ ಮುಂಜಾಗ್ರತಾ ಕ್ರಮವಾಗಿ ಸಿದ್ಧವಾಗಿರಿಸಿದರು. ಆದರೆ ಯಾವುದೇ ಅನಾಹುತ ಸಂಭವಿಸದೇ ಎಲ್ಲವೂ ಸುಗಮವಾಗಿ ನಡೆದಿರುವುದು ಸಮಾಧಾನದ ಸಂಗತಿಯಾಗಿದೆ.
ಈ ಸಂದರ್ಭದಲ್ಲಿ ತೀರ್ಥಹಳ್ಳಿಯ ಮಕ್ಕಳ ತಜ್ಞ ವೈದ್ಯರಾದ ಡಾ. ಸುಪ್ರೀತ್ ಹಾಗೂ ಡಾ. ಸುಮಾ ಸೇರಿದಂತೆ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ತಕ್ಷಣ ಸ್ಪಂದಿಸಿ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಆರೈಕೆ ನೀಡಿ ಕರ್ತವ್ಯನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ ತಿಳಿದುಬಂದಿದೆ.
ಪ್ರಸ್ತುತ ಎಲ್ಲ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕಪಡುವಂತಹ ಯಾವುದೇ ಗಂಭೀರ ಪರಿಸ್ಥಿತಿ ಇಲ್ಲ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು