11:17 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ರಾಷ್ಟಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ : ಮಂಗಳೂರಿನ ಬಾಲಕಿ ಆರ್ನಾ ರಾಜೇಶ್ ಗೆ 2 ಪದಕ

31/12/2021, 12:09

ಮಂಗಳೂರು(reporterkarnataka.com): ರೋಲರ್ ಸ್ಕೇಟಿಂಗ್ ಫೆಡರೇಷನ್ ಆಫ್ ಇಂಡಿಯಾ  ಡಿ.11ರಿಂದ 22ರವರೆಗೆ ದೆಹಲಿಯಲ್ಲಿ ಆಯೋಜಿಸಿದ 59ನೇ ರಾಷ್ಟಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಮಂಗಳೂರಿನ ಆರ್ನಾ ರಾಜೇಶ್ ಅತೀ ಕಿರಿಯ ವಯಸ್ಸಿನಲ್ಲೇ ಎರಡು ಪದಕಗಳನ್ನು ಪಡೆದಿದ್ದಾರೆ.


5ರಿಂದ 7 ವರ್ಷದೊಳಗಿನ ರಾಷ್ಟ್ರಮಟ್ಟದ ಇನ್ ಲೈನ್ ಸ್ಕೇಟಿಂಗ್ ನ ಬಾಲಕಿಯರ ವಿಭಾಗದಲ್ಲಿ ಆರ್ನಾ ರಾಜೇಶ್ ತ್ರೀಲ್ಯಾಪ್ ರಿಂಕ್ ರೇಸ್ ನಲ್ಲಿ ಬೆಳ್ಳಿ ಪದಕ‌ ಹಾಗೂ ಟುಲ್ಯಾಪ್ ರಿಂಕ್ ರೇಸ್ ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ‌


ಆರ್ನಾ ರಾಜೇಶ್ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ 1ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ‌ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿ. ಬೆಂಗಳೂರಿನ ಕೋಚ್ ಪ್ರತೀಕ್ ರಾಜ ಅವರಿಂದ ಬೆಂಗಳೂರಿನಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು