10:23 PM Monday25 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ಚುನಾವಣೆ: ಜುಲೈ 18ರಂದು ಮತದಾನ; ಜೂನ್ 29 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ

09/06/2022, 22:36

ಹೊಸದಿಲ್ಲಿ(reporterkarnataka.com):

ರಾಷ್ಟಪತಿ ಚುನಾವಣೆಯ ದಿನಾಂಕ ಪ್ರಕಟಿಸಲಾಗಿದೆ. ನೂತನ ರಾಷ್ಟ್ರಪತಿ ಆಯ್ಕೆಗೆ ಜುಲೈ 18ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. 

ಇಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹಾಲಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24 ರಂದು ಕೊನೆಗೊಳ್ಳುವ ಹಿನ್ನೆಲೆಯಲ್ಲಿ, ನೂತನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಚುನಾವಣಾ ವೇಳಾಪಟ್ಟಿ:

ಜೂನ್ 29- ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ.

ಜುಲೈ 18- ಮತದಾನ ಪ್ರಕ್ರಿಯೆ.

ಜುಲೈ 21- ಮತ ಎಣಿಕೆ ಕಾರ್ಯ.

2022 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಒಟ್ಟು 4,809 ಮತದಾರರು ಮತ ಚಲಾಯಿಸುತ್ತಾರೆ. ಯಾವುದೇ ರಾಜಕೀಯ ಪಕ್ಷವು ತನ್ನ ಸದಸ್ಯರಿಗೆ ವಿಪ್ ಜಾರಿಗೊಳಿಸುವಂತಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಜುಲೈ 25ರೊಳಗೆ ನೂತನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಿರಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು