6:24 PM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ರಸ್ತೆ ಬದಿಯಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಮಹಿಳೆಗೆ ಆಸರೆ ನೀಡಿದ ಸರಕಾರಿ ವೈದ್ಯ: ತಾಯಿ- ಮಗು ಆರೋಗ್ಯ

27/06/2023, 13:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಸ್ತೆ ಬದಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ತುಂಬ ಗರ್ಭಿಣಿಗೆ ವೈದ್ಯರು ಚಿಕಿತ್ಸೆ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.


ಮೂಲತಃ ಅಜ್ಜಂಪುರ ತಾಲೂಕಿನ ಗಡಿರಂಗಾಪುರ ಗ್ರಾಮದ ಯಶೋಧ ಎಂಬ ಮಹಿಳೆಗೆ 9 ತಿಂಗಳು ತುಂಬಿತ್ತು. ಬಿ ನೆಗೆಟಿವ್ ರಕ್ತದ ಗುಂಪು ಹೊಂದಿರುವ ಗರ್ಭೀಣಿ ಮಹಿಳೆ ಯಶೋಧ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಗೆ ಹೊರಟಿದ್ದರು. ಆಕೆ ಜೊತೆ ಬೇರೊಬ್ಬಳು ಮಹಿಳೆ ಇದ್ದಳು. ಅಜ್ಜಂಪುರದಿಂದ ತರೀಕೆರೆಗೆ ಬಂದು ಶಿವಮೊಗ್ಗ ತೆರಳಲು ಬಸ್ ಕಾಯುವಾಗ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಆಗ ಸ್ಥಳದಲ್ಲಿದ್ದ ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ಹೋಗುವಂತೆ ಸೂಚಿಸಿದ್ದಾರೆ. ಆಸ್ಪತ್ರೆಗೆ ಹೊರಟ ಮಹಿಳೆ ಆಸ್ಪತ್ರೆ ಮುಟ್ಟುವ ಮುನ್ನವೇ ಆಸ್ಪತ್ರೆಯ ತುಸು ದೂರದಲ್ಲಿ ತೀವ್ರವಾದ ನೋವಿನಿಂದ ಬಳಲುತ್ತಿದ್ದಳು. ಅದೇ ಮಾರ್ಗದಲ್ಲಿ ಹೋಗುತ್ತಿದ್ದ ತಾಲೂಕು ವೈದ್ಯಾಧಿಕಾರಿ ಆರ್. ದೇವರಾಜ್ ಆಕೆಯನ್ನ ಆಸ್ಪತ್ರೆಗೆ ಸೇರಿಸಿ ಪ್ರಸೂತಿ ವೈದ್ಯರನ್ನು ಕರೆಸಿ ಹೆರಿಗೆ ಮಾಡಿಸಿದ್ದು, ಇದೀಗ ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ.‌ ಗರ್ಭಿಣಿ ಮಹಿಳೆ ಯಶೋಧ ಬಿ ನೆಗೆಟಿವ್ ರಕ್ತಕ್ಕಾಗಿಯೇ ಶಿವಮೊಗ್ಗ ಹೋಗುತ್ತಿದ್ದರು. ವೈದ್ಯರು ನಿನಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಧೈರ್ಯ ತುಂಬಿ ಹೆರಿಗೆ ಮಾಡಿಸುತ್ತಾರೆ. ಆರಂಭದ ಮೂರು ತಿಂಗಳು ಖಾಸಗಿ ಆಸ್ಪತ್ರೆಗೆ ತೋರಿಸಿದ್ದ ಗರ್ಭಿಣಿ ಯಶೋಧ ಅಲ್ಲಿ ಹೆರಿಗೆಗೆ 30000 ಹಣ ಕೇಳಿದರು ಎಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೋಗುತ್ತಿದ್ದರು. ಸರ್ಕಾರಿ ಆಸ್ಪತ್ರೆ ವೈದ್ಯರ ಕೆಲಸಕ್ಕೆ ಸಾರ್ವಜನಿಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.‌ ಮಹಿಳೆ ಯಶೋಧ ಕೂಡ ತರೀಕೆರೆ ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕೃತಜ್ಞತೆ ಸಲ್ಲಿಸಿದ್ದಾಳೆ.‌

ಇತ್ತೀಚಿನ ಸುದ್ದಿ

ಜಾಹೀರಾತು