8:22 AM Saturday3 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಇತ್ತೀಚಿನ ಸುದ್ದಿ

ರಸ್ತೆ ಗುಂಡಿಯಲ್ಲೂ ಹಣ ಗುಳುಂ: ಹೊಂಡ ಮುಚ್ಚದಿದ್ದರೂ ಗುತ್ತಿಗೆದಾರರ ಬಿಲ್ ಪಾಸ್ ಮಾಡುವ ಎಂಜಿನಿಯರ್ ಗಳು!

26/02/2022, 19:32

ರಂಜಿನಿ ಕುಟ್ಟಪ್ಪ ಪೊನ್ನಂಪೇಟೆ ಮಡಿಕೇರಿ

info.reporterkarnataka.com

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯಿಂದ ಹಾಲೇರಿವರೆಗೆ ರಸ್ತೆಯ ಗುಂಡಿಗಳ ಮುಚ್ಚುವ ಕೆಲಸದಲ್ಲಿ ಅವ್ಯವಹಾರ ನಡೆದಿದೆ ಎಂದು ಕನ್ನಡ ರಕ್ಷಣಾ ವೇದಿಕೆ ಆರೋಪಿಸಿದರು.


ರಸ್ತೆ ಗುಂಡಿ ಮುಚ್ಚುವ ಕೆಲಸಕ್ಕೆ ಸರಕಾರದಿಂದ ಲಕ್ಷಾಂತರ ರೂ. ಬಿಡುಗಡೆಯಾಗಿದೆ. ಈ ಹಣ ಗುತ್ತಿಗೆದಾರರ ಪಾಲಾಗುತ್ತಿದೆ. ಈ ರಸ್ತೆಗಳನ್ನು ನೋಡಿಕೊಳ್ಳಲೆಂದು ಇಂಜಿನಿಯರ್ ಗಳಿಗೆ ನೇಮಿಸಿರುತ್ತಾರೆ. ಆದರೆ ಲೋಕೋಪಯೋಗಿ ಇಂಜಿನಿಯರ್ ಗಳು ಇದನ್ನೆಲ್ಲ ಮರೆತು ಗುತ್ತಿಗೆದಾರರು ಕೆಲಸ ಮಾಡದಿದ್ದರೂ  ಅವರಿಗೆ ಬಿಲ್ ಮಾಡುವ ಕೆಲಸ ನಡೆಸುತ್ತಿದ್ದಾರೆ. ಸರಿಯಾಗಿ ಗುಂಡಿ ಮುಚ್ಚುವ ಕೆಲಸ ಎಲ್ಲೂ ಆಗಿಲ್ಲ. ಹಾಗಾಗಿ ಇವರ ಮೇಲೆ ಸರಿಯಾದ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮತ್ತು ಕೊಡಗು ಲೋಕೋಪಯೋಗಿ ಇಲಾಖೆಗೆ ಪತ್ರಿಕೆ ಮುಖಾಂತರ ಮನವಿ ಮಾಡಲಾಗಿದೆ. ಇದನ್ನು ಸರಿಪಡಿಸದಿದ್ದರೆ ಲೋಕಾಯುಕ್ತಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ದೂರು ಕೊಡಲು ಕರವೇ ಕಾರ್ಯಕರ್ತರು ಸಿದ್ಧಗೊಳ್ಳುತ್ತಿದ್ದಾರೆ ಎಂದು  ಕರವೇ ಅಧ್ಯಕ್ಷರು ಫ್ರಾನ್ಸಿಸ್ ಡಿಸೋಜ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು