ಇತ್ತೀಚಿನ ಸುದ್ದಿ
ರಸ್ತೆ ಕಾಮಗಾರಿ ವಿಳಂಬ ಮಾಡಿದ ಗುತ್ತಿಗೆದಾರರ ಕಪ್ಪು ಪಟ್ಟಿಗೆ ಸೇರಿಸಿ: ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆ
18/07/2021, 09:47
ಮಂಗಳೂರು (reporterkarnataka news): ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್ ಕಚೇರಿಯ ನೇತ್ರಾವತಿ ಸಭಾಂಗಣದಲ್ಲಿ
ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ ಸಭೆ ನಡೆಯಿತು.
ಸಭೆಯಲ್ಲಿ ರಾಷ್ಟ್ರೀಯ ಸಾಮಾಜಿಕ ನೆರವು, ಪ್ರಧಾನಮಂತ್ರಿ ನಗರ ಅವಾಸ್ ಯೋಜನೆ, ದೀನ್ ದಯಾಳ್ ಉಪಾಧ್ಯಾಯ ಯೋಜನೆ ಸ್ವಚ್ಛ ಭಾರತ ಮಿಷನ್, ಅಮೃತ ಯೋಜನೆ, ೧೪ ೧೫ನೇ ಹಣಕಾಸು ಯೋಜನೆ ,ರೈಲ್ವೆ ಇಲಾಖೆಯ ಪ್ರಸ್ತಾವನೆಗಳು, ಸ್ಮಾರ್ಟ್ ಸಿಟಿ ಮಿಷನ್, ಗ್ರಾಮ ಯೋಜನೆ, ಸಣ್ಣ ನೀರಾವರಿ, ತೋಟಗಾರಿಕೆ, ಕೃಷಿ, ಸಮಾಜ ಕಲ್ಯಾಣ, ಸಮಗ್ರ ಜಲಾನಯನ ನಿರ್ವಹಣಾ ಕಾರ್ಯಕ್ರಮ ಆಯೋಜನೆ, ಶಿಕ್ಷಣ ಅಭಿಯಾನ ಯೋಜನೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ, ೧೫ನೇ ಹಣಕಾಸು, ಬಯೋಗ್ಯಾಸ್ ಯೋಜನೆ, ಪ್ರಧಾನಮಂರಿ ಗ್ರಾಮೀಣ ಆವಾಸ್ ಯೋಜನೆ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ಗ್ರಾಮೀನ ನೀರು ಸರಬರಾಜು ಯೋಜನೆ ರಾಷ್ಟ್ರೀಯ ಆರೋಗ್ಯ ಮಿಷನ್, ಮೀನುಗಾರಿಕೆ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಯಿತು.
ಈ ಇಲಾಖೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳು ಹಾಗೂ ಯೋಜನೆಗಳ ಕುರಿತು ಪ್ರಗತಿಯನ್ನು ಪರಿಶೀಲಿಸಿದ ಸಂಸದರು, ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ನಿರ್ದೇಶನಗಳು ಹಾಗೂ ಸೂಚನೆಗಳನ್ನು ನೀಡಿದರು.
ರಾಷ್ಟ್ರೀಯ ಹೆದ್ದಾರಿ ಯೋಜನೆಯಡಿ ಕೈಗೊಳ್ಳಲಾದ ವಿವಿಧ ರಸ್ತೆಗಳ ನಿರ್ಮಾಣ ಕಾಮಗಾರಿಯನ್ನು ಅವಧಿಯೊಳಗೆ ಪೂರ್ಣಗೊಳಿಸಬೇಕು, ಗುತ್ತಿಗೆದಾರರ ಸಮಸ್ಯೆ ಇದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತರಬೇಕು, ಗುತ್ತಿಗೆದಾರರನ್ನು ಬದಲಾಯಿಸಿ ಯೋಜನೆಗಳನ್ನು ಮುಂದುವರಿಸಬೇಕು. ಕಳೆದ ಮೂರು ತಿಂಗಳಿಂದ ವಿವಿಧ ರಸ್ತೆ ನಿರ್ಮಾಣ ಕಾಮಗಾರಿಗಳು ನಿಧಾನವಾಗಿದ್ದು ಅವುಗಳಿಗೆ ಚುರುಕು ನೀಡಬೇಕು. ನಿರ್ಮಾಣ ಕಾಮಗಾರಿಗೆ ಹಿಂಜರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಹೆಗಡೆ ತಮ್ಮ ಇಲಾಖೆಯ ಮೇಲಿನ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಮನ್ವಯ ಸಾಧಿಸಿ, ಜಿಲ್ಲೆಗೆ ಮಂಜೂರಾದ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.
ಲೋಕೋಪಯೋಗಿ ಇಲಾಖೆ ವತಿಯಿಂದ ಮೂಡುಬಿದರೆ – ಕಲ್ಲುಬೆಟ್ಟ, ಜೋಕಟ್ಟೆಯಿಂದ ಬೈಕಂಪಾಡಿ, ಮಂಗಳ ಪೇಟೆಯಿಂದ ಗುರುಪುರ ವರೆಗೆ ಕೆಲವು ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತಿವೆ, ಕೆಲ ರಸ್ತೆ ಕಾಮಗಾರಿಗೆ ೨ ವರ್ಷಗಳ ಹಿಂದೆ ಭೂಮಿಪೂಜೆ ನೆರವೇರಿಸಿದರು ಇದುವರೆಗೂ ಆರಂಭಗೊAಡಿಲ್ಲ, ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಮತ್ತೊಮ್ಮೆ ಟೆಂಡರ್ ಕರೆಯುವಂತೆ ತಿಳಿಸಿದರು.
ಮಳೆಗಾಲ ಕಾರಣ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಬರುವ ರಸ್ತೆಗಳಲ್ಲಿ ದುರಸ್ತಿ ಕಂಡುಬಂದರೆ ಕೂಡಲೇ ದುರಸ್ತಿ ಪಡಿಸಬೇಕು, ಯಾವ-ಯಾವ ರಸ್ತೆಗಳು ದುರಸ್ತಿ ಈಡಾಗುತ್ತವೆ ಎಂಬುವ ಬಗ್ಗೆ ನಿಗಾವಹಿಸಿ ತಂಡವನ್ನು ಸಿದ್ಧಪಡಿಸಿಟ್ಟುಕೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ಗೆ ಸಂಸದರು ನಿರ್ದೇಶನ ನೀಡಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಬಿಸಿರೋಡ್ – ಪೆರಿಯ ಶಾಂತಿ ಕಾಮಗಾರಿಗಳನ್ನು ಕೂಡಲೇ ಆರಂಭಿಸಬೇಕು, ಕೊಟ್ಟಾರ ಚೌಕಿಯ ಕೋಡಿಕಲ್ ರಸ್ತೆ ಹತ್ತಿರದ ೪೦೦ ಮೀಟರ್ ಸರ್ವಿಸ್ ರಸ್ತೆ ಕಾಮಗಾರಿಗೆ ಟೆಂಡರ್ ಕರೆಯಲಾಗಿದ್ದು ವಿದ್ಯುತ್ ಕಂಬವನ್ನು ಮೆಸ್ಕಾಂನವರು ಕೂಡಲೇ ಸ್ಥಳಾಂತರ ಮಾಡಬೇಕು ಎಂದರು.
ರೈತರಿಗೆ ನೆರವಾಗಲು ತೋಟಗಾರಿಕೆ ಇಲಾಖೆಯು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಡಿಯಲ್ಲಿ ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಒಗ್ಗೂಡಿಸಲು ಸಾಕಷ್ಟು ರೈತರ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರಲ್ಲದೆ ಗೋಂಡಂಬಿಗೆ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ದರ ಮತ್ತು ಬೇಡಿಕೆ ಇದ್ದು ಬೆಳೆ ನಶಿಸಿದಲ್ಲಿ ಅಥವಾ ಇಳುವರಿ ಕುಗ್ಗಿದಲ್ಲಿ ಅದರ ಪುನಶ್ಚೇತನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದರು.
ಎನ್.ಆರ್.ಎಲ್.ಎಮ್ ಯೋಜನೆಯಡಿ ೧೮೦ ಫಲಾನುಭವಿಗಳು ಅಣಬೆ ಕೃಷಿಯನ್ನು ಹಾಗೂ ೧೩ ಫಲಾನುಭವಿಗಳು ಹೈನುಗಾರಿಕೆಯನ್ನು ಮಾಡುತ್ತಿದ್ದು ಇದನ್ನು ಸ್ಥಳೀಯವಾಗಿ ಮಾರುಕಟ್ಟೆಗಳಲ್ಲಿ ವ್ಯಾಪರ ಮಾಡಲಾಗುತ್ತಿದ್ದೆ ಎಂದು ಹೇಳಿದರು.
ಮೇವು ಕತ್ತರಿಸುವ ಯಂತ್ರ ಯೋಜನೆಯಡಿ ಎಲ್ಲಾ ಫಲಾನುಭವಿಗಳಿಗೂ ಯಂತ್ರಗಳನ್ನು ನೀಡಲಾಗಿದ್ದು. ಪಶು ಭಾಗ್ಯಯೋಜನೆಯಡಿ ೧೨೬ ಫಲಾನುಭವಿಗಳಿಗೆ ಸಹಾಯಧನ ಮತ್ತು ರಾಷ್ಟ್ರೀಯ ಜಾನುವಾರು ಯೋಜನೆಯಡಿ ೧೧ ಆಡು ಸಾಕಾಣಿಕೆ ಘಟಕವು ಮಂಜೂರಾಗಿದೆ ಎಂದು ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕರು ಮಾಹಿತಿ ನೀಡಿದರು.
ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿರುವ ಅಪೌಷ್ಟಿಕತೆಯುಳ್ಳ ಮಕ್ಕಳನ್ನು ಗುರುತಿಸಿ ಅಂತಹ ಮಕ್ಕಳಿಗೆ ದಿನ ನಿತ್ಯ ಮೊಟ್ಟೆ ಮತ್ತು ಹಾಲನ್ನು ನೀಡಲಾಗುತ್ತಿದ್ದೆ ಎಂದು ಅಕ್ಷರ ದಾಸೋಹದ ಶಿಕ್ಷಣಾಧಿಕಾರಿ ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಾತನಡಿ, ಜಿಲ್ಲೆಯಲ್ಲಿ ಇಲ್ಲಿಯವರೆಗೂ ಒಟ್ಟು ೯೬೬೫೮ ಕೋವಿಡ್ ಪ್ರಕರಣಗಳು ದಾಖಲಾಗಿದ್ದು ಕೋವಿಡ್‌ನಿಂದ ಸತ್ತವರ ಸಂಖ್ಯೆ ಒಟ್ಟು ೧೩೬೨ ಆಗಿದ್ದು ಕೋವಿಡ್‌ನ ಎರಡನೇ ಅಲೆಯಲ್ಲಿ ಮಾರ್ಚ್ ೧ ರಿಂದ ಇಲ್ಲಿಯವರೆಗು ಒಟ್ಟು ೬೧,೯೯೯ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮಾತನಾಡಿ, ಕೋವಿಡ್‌ನ ಮೂರನೇ ಅಲೆ ಎದುರಾದಲ್ಲೀ, ಮಕ್ಕಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳಿದ್ದು, ಅದಕ್ಕೆ ಮುಂಜಾಗ್ತತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಮಳೆಗಾಲದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದ್ದು ಅದಕ್ಕಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ನೀರು ನಿಲ್ಲುವ ಜಾಗಗಳನ್ನು ಗುರುತಿಸಿ ಫಾಗಿಂಗ್ ಅಥವಾ ಮಿನುಗಳನ್ನು ಬಿಡುವ ಮುಖಾಂತರ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿದರು.
ಶಾಸಕರಾದ ಭರತ್ ಶೆಟ್ಟಿ, ಉಮನಾಥ್ ಕೋಟ್ಯಾನ್ ಹಾಗೂ ರಾಜೇಶ್ ನಾಯ್ಕ್ ಸಭೆಯಲ್ಲಿದ್ದರು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.