5:31 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ರಸ್ತೆ ಮಧ್ಯದಲ್ಲೇ ಆಟೋ ಚಾಲಕನ ಯು ಟರ್ನ್: ಹೆಲ್ಮೆಟ್ ಧರಿಸದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

21/02/2023, 19:33

ಮಂಗಳೂರು(reporterkarnataka.com): ಆಟೋ ಚಾಲಕನ ನಿರ್ಲಕ್ಷ್ಯದ ಚಾಲನೆ ಹಾಗೂ ಹೆಲ್ಮೆಟ್ ರಹಿತ ಪ್ರಯಾಣದಿಂದ ಯುವಕನೊಬ್ಬ ಸ್ಥಳದಲ್ಲೇ ಕೊನೆಯುಸಿರೆಳೆದ ಹೃದಯ ವಿದ್ರಾವಕ ಘಟನೆ ನಗರದ ಬಿಜೈನಲ್ಲಿ ನಡೆಯಿತು.

ಪಾದಚಾರಿಗಳು, ದಾರಿ ಹೋಕರು ನೋಡು ನೋಡುತ್ತಿದ್ದಂತೆ ಈ ಘೋರ ದುರಂತ ನಡೆದೇ ಹೋಯಿತು.ಆಟೋ ಚಾಲಕನ ನಿರ್ಲಕ್ಷ್ಯದ ತಿರುವು ಮತ್ತು ಬೈಕ್ ಸವಾರ ಹೆಲ್ಮೆಟ್ ಹಾಕದಿರುವುದು ಅಪಘಾತಕ್ಕೆ ಕಾರಣ ಸವಾರ ಕವನ್ ಆಳ್ವ(20) ಪ್ರಾಣ ಕಳೆದುಕೊಳ್ಳುವಂತಾಯಿತು.

ಬಿಜೈ ಚರ್ಚ್ ಹಾಲ್ ಮುಂಭಾಗದ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದ್ದು ಆಟೋ ಚಾಲಕ ನಿರ್ಲಕ್ಷ್ಯದಿಂದ ರಸ್ತೆ ಮಧ್ಯದಿಂದಲೇ ಯು ಟರ್ನ್ ತಿರುವು ತೆಗೆದುಕೊಂಡಿದ್ದ. ಮುಂದಿನಿಂದ ಬರುತ್ತಿದ್ದ ಬೈಕ್ ಸವಾರ ಆಯತಪ್ಪಿ ರಿಕ್ಷಾಗೆ ಡಿಕ್ಕಿಯಾಗಿದ್ದು ರಸ್ತೆ ಬದಿಯ ಮರಕ್ಕೆ ಹೋಗಿ ಬಡಿದಿದ್ದಾನೆ. ತಲೆಯ ಭಾಗ ನೇರವಾಗಿ ಮರಕ್ಕೆ ಬಡಿದಿದ್ದರಿಂದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬಿಜೈ ನಿವಾಸಿಯಾಗಿದ್ದು ನಗರದ ಎಸ್.ಡಿ.ಎಂ ಕಾಲೇಜಿನಲ್ಲಿ ಬಿಬಿಎಂ ತೃತೀಯ ವರ್ಷದ ವಿದ್ಯಾರ್ಥಿಯಾಗಿದ್ದ ಕವನ್ ಆಳ್ವ(20) ಮೃತ ಯುವಕ. ಆಟೋ ಚಾಲಕನ ನಿರ್ಲಕ್ಷ್ಯದ ತಿರುವು ಮತ್ತು ಹೆಲೆಟ್ ಇಲ್ಲದೆ ದ್ವಿಚಕ್ರ ವಾಹನ ಚಾಲನೆಯ ಪರಿಣಾಮ ಯುವಕ ಸಾವು ಕಂಡಿದ್ದಾನೆ. ಕದ್ರಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು