7:01 AM Wednesday27 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ರಸ್ತೆ ವಿವಾದ: ಪಕ್ಕದ ಮನೆಯವರ ಕಿರುಕುಳ, ಬೆದರಿಕೆಗೆ ಮನನೊಂದು ವ್ಯಕ್ತಿ ಆತ್ಮಹತ್ಯೆ

10/12/2021, 14:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮನೆಗೆ ತೆರಳಲು ರಸ್ತೆ ನಿರ್ಮಿಸುವ ವಿಚಾರದಲ್ಲಿ ಪಕ್ಕದವರು ನೀಡುತ್ತಿದ್ದ ಕಿರುಕುಳ ತಾಳಲಾರದೆ ಬೇಸತ್ತ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ .

ಗೋಣಿಬೀಡು ಹೋಬಳಿ ಕಸ್ಕೆಬೈಲು ವಾಸಿ ಆನಂದ (57) ಇತ್ತೀಚೆಗೆ ಮನೆ ಬಿಟ್ಟು ಹೋಗಿದ್ದು ಅವರ ಶವ  ಹಿಂದೂ ರುದ್ರಭೂಮಿಯಲ್ಲಿ ಪತ್ತೆಯಾಗಿದೆ .

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು , ಇದಕ್ಕೆ ಅಶೋಕ ಮತ್ತು ಯಶೋಧ ನೀಡುತ್ತಿದ್ದ ಮಾನಸಿಕ ಕಿರುಕುಳ, ಹಲ್ಲೆ ಬೆದರಿಕೆಗಳೇ ಕಾರಣ ಎಂದು ಮೃತನ ಪುತ್ರ ಅಂಕಿತ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ತಮ್ಮ ಮನೆಗೆ ತಿರುಗಾಡಲು ರಸ್ತೆ ಇಲ್ಲದಿದ್ದು , ಹಿಂಬದಿಯ ಸರ್ಕಾರಿ ಜಾಗದಲ್ಲಿ ರಸ್ತೆ ಬಿಡಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರು ಎನ್ನಲಾಗಿದೆ .

ಈ ಮಧ್ಯೆ ಸರ್ಕಾರಿ ಭೂಮಿಯಲ್ಲಿ ಹಿಡುವಳಿ ಮಾಡಿಕೊಂಡಿರುವ ಅಶೋಕ್ ಮತ್ತವರ ಪತ್ನಿ  ,ತಮ್ಮ ತಂದೆ ತಾಯಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ .

ಪದೇ ಪದೇ ನೀಡುತ್ತಿದ್ದ ಕಿರುಕುಳ ಹಲ್ಲೆ ಬೆದರಿಕೆಯಿಂದ ಬೇಸತ್ತ ತಮ್ಮ ತಂದೆ ಮಾನಸಿಕ ವೇದನೆ ಅನುಭವಿಸುತ್ತಿದ್ದು ಆತ್ಮಹತ್ಯೆಗೆ ಇದೇ ಕಾರಣ ಎಂದು ಉಲ್ಲೇಖಿಸಿದ್ದಾರೆ . ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು