ಇತ್ತೀಚಿನ ಸುದ್ದಿ
ರಸ್ತೆಯಿಂದ 20 ಅಡಿ ಕೆಳಗಿನ ಮನೆಯಂಗಳಕ್ಕೆ ಬಿದ್ದ ಇನೊವಾ ಕಾರು: 9 ಮಂದಿಗೆ ತೀವ್ರ ಗಾಯ; ಕೋಲಾರದಿಂದ ಹೊರನಾಡಿಗೆ ಪ್ರಯಾಣಿಸುತ್ತಿದ್ದ ಭಕ್ತರು
30/07/2023, 23:23
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ಮನೆಯ ಮುಂಭಾಗಕ್ಕೆ ಇನ್ನೊವಾ ಕಾರು ಹಾರಿ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 9 ಮಂದಿ ತೀವ್ರ ಗಾಯಗೊಂಡಿದ್ದಾರೆ.
ಕೋಲಾರದಿಂದ ಹೊರನಾಡಿಗೆ ಹೋಗುತ್ತಿದ್ದ ಪ್ರವಾಸಿಗರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಅಪಘಾತದಲ್ಲಿ ಇವರೆಲ್ಲ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಮಾರು 20 ಅಡಿ ಎತ್ತರದಿಂದ ಮನೆಯ ಮುಂಭಾಗಕ್ಕೆ ಕಾರು ಬಿದ್ದಿದೆ. ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿರುವುದೇ ಅಪಘಾತಕ್ಕೆ ಕಾರಣವಾಗಿದೆ.
ಕಳಸ ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.