ಇತ್ತೀಚಿನ ಸುದ್ದಿ
ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು: ಓಡಿಹೋಗಿ ಪ್ರಾಣ ಉಳಿಸಿಕೊಂಡ 4 ಮಂದಿ ಪ್ರಯಾಣಿಕರು
08/06/2024, 12:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಶಾರ್ಟ್ ಸರ್ಕ್ಯೂಟ್ ನಿಂದ ರಸ್ತೆ ಮಧ್ಯೆ ಕಾರು ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.
ಕಡೂರಿನ ಸರಸ್ವತಿಪುರ ಗೇಟ್ ಬಳಿ ಈ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಸ್ವಿಫ್ಟ್ ಕಾರು ಹೊತ್ತಿ ಉರಿದಿದೆ.
ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಇದಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ನಾಲ್ವರು ಪ್ರಯಾಣಿಕರು ಕೆಳಗಿಳಿದು ಜೀವ ಉಳಿಸಿಕೊಂಡಿದ್ದಾರೆ. ಕಡೂರು ಅಗ್ನಿ ಶಾಮಕ ಠಾಣೆಯ ಸಿಬ್ಬಂದಿ ಬೆಂಕಿ ನಂದಿಸಲು ನೆರವಾದರು.
…