4:35 AM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ರಸ್ತೆ ಅಪಘಾತ: ಗಾಯಾಳು ಸಹಾಯಕ ಪೊಲೀಸ್ ಉಪ ನಿರೀಕ್ಷಕ ಸದಾಶಿವ ಮೃತ್ಯು

18/03/2022, 21:23

ಮಂಗಳೂರು(reporterkarnataka.com):

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ
ಸಹಾಯಕ ಪೊಲೀಸ್ ಉಪ ನಿರೀಕ್ಷಕ ಸದಾಶಿವ ಅವರು ಮೃತಪಟ್ಟಿದ್ದಾರೆ.

ಅವರು ಮಾ. 14 ರಂದು ರಾತ್ರಿ 9-10ರ ವೇಳೆಗೆ
ಸಂಚಾರ ನಿಯಂತ್ರಣ ಕರ್ತವ್ಯದ ಬಗ್ಗೆ ಕೊಟ್ಟಾರ ಚೌಕಿ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಕೊಟ್ಟಾರ ಚೌಕಿಯ  ಅಮರಾನ್ ಬ್ಯಾಟರಿ ಸೇಲ್ಸ್ ಮತ್ತು ಸರ್ವಿಸ್  ಬಳಿ ರಸ್ತೆ ಅಪಘಾತಕ್ಕೀಡಾಗಿದ್ದರು. ತೀವ್ರವಾಗಿ ಗಾಯಗೊಂಡ ಅವರನ್ನು ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುತ್ತಾರೆ.

ಸದಾಶಿವ ಅವರು1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು.ಅವರು ಪೊಲೀಸ್ ಕಾನ್ ಸ್ಟೇಬಲ್ ಆಗಿ ಮೊದಲಿಗೆ ಪಡುಬಿದ್ರೆ ಪೊಲೀಸ್ ಠಾಣೆ, ಸಂಚಾರ ಪೂರ್ವ ಪೊಲೀಸ್ ಠಾಣೆ, ಸಂಚಾರ ಪಶ್ಚಿಮ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಹೆಡ್ ಕಾನ್ ಸ್ಟೇಬಲ್ ಆಗಿ ಫಾರೆಸ್ಟ್ ಸ್ಕ್ಯಾಡ್,  ಸಂಚಾರ ಉತ್ತರ ಪೊಲೀಸ್ ಠಾಣೆ, ಸಿಎಸ್ಬಿ ಘಟಕದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

2019, ಜೂನ್  ನಿಂದದ ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು