7:53 PM Saturday21 - February 2026
ಬ್ರೇಕಿಂಗ್ ನ್ಯೂಸ್
ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ…

ಇತ್ತೀಚಿನ ಸುದ್ದಿ

ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತಕ್ಕೆ ನ್ಯೂ ಲುಕ್:  ಪ್ರವಾಸಿಗರನ್ನು ಕೈಬೀಸಿ ಕರೆಯಲಿದೆ ಕನ್ನಡದ ಮೇರು ಕವಿಯ ಕಂಚಿನ ಪುತ್ಥಳಿ

15/03/2022, 23:36

ಮಂಗಳೂರು(reporterkarnataka.com):  ಆಧುನಿಕ ಸ್ಪರ್ಶದೊಂದಿಗೆ ಸಂಪ್ರದಾಯದ ತಳಹಾದಿಯ ಮೇಲೆ ನಗರದ ಕೊಡಿಯಾಲ್ ಬೈಲ್ ಸಮೀಪದ  ಮಂಜೇಶ್ವರ ಗೋವಿಂದ ಪೈ ವೃತ್ತ ನವೀಕರಣಗೊಳ್ಳುತ್ತಿದೆ. ಕನ್ನಡದ ಮೇರು ಕವಿ ಕುಳಿತು ಪತ್ರಿಕೆ ಓದುವ ಭಂಗಿಯ ಕಂಚಿನ ಪ್ರತಿಮೆಯನ್ನು ಅಳಡಿಸಲಾಗಿದೆ.

ಪ್ರಪ್ರಥಮ ಬಾರಿಗೆ ಕನ್ನಡಕ್ಕೆ ರಾಷ್ಟ್ರಕವಿ ಗೌರವವನ್ನು ತಂದುಕೊಟ್ಟ,ಗೋವಿಂದ ಪೈ ಅವರು ಗಡಿನಾಡು ಮಂಜೇಶ್ವರದಲ್ಲಿ ಹುಟ್ಟಿದರೂ ಇಡೀ ಶಿಕ್ಷಣವನ್ನು ಪಡೆದಿರುವುದು ಮಂಗಳೂರಿನಲ್ಲಿ.
ಇಡೀ ರಾಷ್ಟ್ರವೇ ಬೆರಗಾಗುವಂತಹ ಕೃತಿಗಳನ್ನು ಸೃಷ್ಟಿಸಿದವರು ಮಂಜೇಶ್ವರ ಗೋವಿಂದ ಪೈ. ಈ ಹಿನ್ನೆಲೆಯಲ್ಲಿ ಕೊಡಿಯಾಲ್ ಬೈಲ್ ನಲ್ಲಿರುವ ವೃತ್ತಕ್ಕೆ ಗೋವಿಂದ ಪೈ ಅವರ ಹೆಸರಿಡಲಾಗಿತ್ತು.

ಇದೀಗ ವೃತ್ತ ಹೊಸ ರೂಪದೊಂದಿಗೆ ಮೈದಳೆದುಕೊಂಡಿದೆ. ಸಾಂಪ್ರದಾಯಿಕ ವಿನ್ಯಾಸದೊಂದಿಗೆ ಆಧುನಿಕತೆಯ ಸ್ಪರ್ಶ ಪಡೆದು ಸಿದ್ಧಗೊಂಡಿರುವ ಈ ವೃತ್ತ ಭವಿಷ್ಯದ ಪೀಳಿಗೆಗೆ ಸಾಹಿತ್ಯಲೋಕದ ಧ್ರುವತಾರೆ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈಗಳ ನೆನಪನ್ನು ಮನಸ್ಸಿನಲ್ಲಿ ಅಚ್ಚೊತ್ತುವಂತೆ ಮಾಡಲಿದೆ. ರಾಷ್ಟ್ರಕವಿ ಗೋವಿಂದ ಪೈಗಳು ಕೈಯಲ್ಲಿ ‘ನವಭಾರತ ಪತ್ರಿಕೆ’ ಯನ್ನು ಹಿಡಿದು ಓದುತ್ತಾ ಕುಳಿತಿರುವ ಭಂಗಿಯಲ್ಲಿರುವ ಕಂಚಿನ ಪುತ್ಥಳಿ ಇಲ್ಲಿ ಸ್ಥಾಪಿಸಲಾಗುತ್ತಿದ್ದು, ಅದರ ನಿರ್ಮಾಣವನ್ನು ಕಾರ್ಕಳದ ಶಿಲ್ಪಿ ಕೃಷ್ಣ ಆಚಾರಿಯವರ ತಂಡದವರು  ಮಾಡಿದ್ದಾರೆ. ದೇಶ, ವಿದೇಶಗಳಿಂದ ಮಂಗಳೂರಿಗೆ ಬರುವ ಅತಿಥಿಗಳು ಉಳಿದುಕೊಳ್ಳುವ ಓಶಿಯನ್ ಪರ್ಲ್ ಹೋಟೇಲಿನ ಎದುರಿನಲ್ಲಿರುವ ಈ ವೃತ್ತ ಮಂಗಳೂರಿನ ಸೌಂದರ್ಯವನ್ನು ಹೆಚ್ಚಿಸುವಲ್ಲಿ ಸಹಜವಾಗಿ ಆಕರ್ಷಣೀಯ ಕೇಂದ್ರಬಿಂದುವಾಗಲಿದೆ. ವೃತ್ತದ ಒಳಗಿರುವ ಪುರಾತನ ಕಾಲದ ಬಾವಿಯನ್ನು ಹಾಗೆ ಉಳಿಸಲಾಗಿದ್ದು, ಅದರ ನೀರನ್ನೇ ಕಾರಂಜಿಯಂತೆ ವೃತ್ತದಲ್ಲಿ ಚಿಮ್ಮಿಸಿ ಇನ್ನಷ್ಟು ಆಕರ್ಷಣೀಯವಾಗಿಸುವ ಯೋಜನೆ ಮಾಡಲಾಗಿದೆ. ವೃತ್ತದ ಒಳಗೆ ಹೂಗಳನ್ನು ಮತ್ತು ಹಚ್ಚಹಸುರಿನ ಹುಲ್ಲುಗಳನ್ನು ಬೆಳೆಸಲಾಗುತ್ತಿದ್ದು, ಅದಕ್ಕಾಗಿ ಪ್ರತ್ಯೇಕ ಸ್ಥಳಗಳನ್ನು ಖ್ಯಾತ ಸೌಂದರ್ಯ ವಿನ್ಯಾಸಕಾರರಾದ ಸುಜಯ್ ಲೋಬೋ ಅವರು ಗುರುತಿಸಿ ಅಭಿವೃದ್ಧಿಪಡಿಸಿದ್ದಾರೆ. ವೃತ್ತದ ಸುತ್ತಲೂ ಕೆತ್ತನೆಯ ಕಬ್ಬಿಣದ ಗ್ರೀಲ್ ಗಳನ್ನು ಅಳವಡಿಸಲಾಗಿದ್ದು, ಅದರಲ್ಲಿ ಸಾಂಪ್ರದಾಯಿಕ ಕುಸುರಿ ಕೆಲಸ ಮಾಡಲಾಗಿದೆ. ಕಾರಂಜಿ ಮತ್ತಿತರ ವಿದ್ಯುತ್ ಅಲಂಕಾರಿಕ ವಸ್ತುಗಳ ಅಳವಡಿಕೆ ಯನ್ನು ಗಣೇಶ್ ಎಲೆಕ್ಟ್ರಿಕಲ್ ನ ಸೀತಾರಾಂ ಅವರು ವಹಿಸಿಕೊಂಡಿದ್ದರು.  ಗೋವಿಂದ ಪೈಯವರ ಕಂಚಿನ ಮೂರ್ತಿಯ ನಿರ್ಮಾಣ ರಥಬೀದಿಯ ಗೋವರ್ಧನ್ ಮೆಟಲ್ಸ್ ನವರು ಮಾಡಿರುತ್ತಾರೆ. 

ಇದರ ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿರುವ ಖ್ಯಾತ ಬಿಲ್ಡರ್ ಗಿರಿಧರ್ ಶೆಟ್ಟಿ ಈ ಬಗ್ಗೆ ಮಾಹಿತಿ ನೀಡಿ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಈ ವೃತ್ತದ ಪುನರ್ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸಿದ್ದು, ಟ್ರಸ್ಟಿನ ಅಧ್ಯಕ್ಷರಾದ, ಶಾಸಕ ವೇದವ್ಯಾಸ ಕಾಮತ್ ಅವರ ಅಪೇಕ್ಷೆಯಂತೆ ಈ ವೃತ್ತ ಇತಿಹಾಸ ಮತ್ತು ಪ್ರಸ್ತುತ ಮಾದರಿಯ ಶೈಲಿಯ ಸಮರ್ಪಕ ಮಿಳಿತದೊಂದಿಗೆ ರಚನೆಯಾಗಿದೆ ಎಂದು ತಿಳಿಸಿದ್ದಾರೆ. 

ಈ ವೃತ್ತದ ನಿರ್ಮಾಣದಲ್ಲಿ ಸೂಕ್ತ ಸಲಹೆ, ಸಹಕಾರ ನೀಡಿದ ಉದ್ಯಮಿ ಮಂಗಲ್ಪಾಡಿ ನರೇಶ್ ಶೆಣೈಯವರ ಸಹಕಾರ ಕೂಡ ಉಪಯುಕ್ತವಾಗಿದೆ ಎಂದು ಅವರು ಹೇಳಿದ್ದಾರೆ. ಫುಜ್ಲಾನಾ ಗ್ರೂಪಿನಿಂದ ಈ ವೃತ್ತದ ನವೀಕರಣದ ಯೋಜನೆ ಮಾಡಲಾಗಿದ್ದು, ವನಿತಾ ಅಚ್ಯುತ್ ಪೈ ಅವರ ಸ್ಮರಣಾರ್ಥ ಅವರ ಮಕ್ಕಳ ಕೊಡುಗೆಯಾಗಿ ಈ ವೃತ್ತ ರಚನೆಯಾಗಿದೆ. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಈ ವೃತ್ತದ ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದು, ಮಂಗಳೂರು ಮಹಾನಗರ ಪಾಲಿಕೆ ಅದಕ್ಕೆ ಅಧಿಕೃತವಾಗಿ ಲಿಖಿತ ಒಪ್ಪಿಗೆ ನೀಡಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು