3:53 AM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ರಾಷ್ಟ್ರಮಟ್ಟದ ಮಣಿಪುರ ಕಳರಿ ಫೈಟ್: ಸುಂಕದಕಟ್ಟೆ ಪಾಲಿಟೆಕ್ನಿಕ್ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಸತೀಶ್ ಎಸ್. ಗೆ ಕಂಚು

09/10/2024, 23:01

ಬಂಟ್ವಾಳ(reporterkarnataka.com): ಮಧ್ಯಪ್ರದೇಶದ ಥಾಂಗ್-ತಾ ಅಸೋಸಿಯೆಷನ್ ವತಿಯಿಂದ‌ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದ ರಾಷ್ಟ್ರೀಯ ಜೂನಿಯರ್ ತಾಂಗ್- ತಾ( ಮಣಿಪುರ ಕಳರಿ ಫೈಟ್) ಚಾಂಪಿಯನ್ ಶಿಪ್ ನಲ್ಲಿ ಸುಂಕದಕಟ್ಟೆ ನಿರಂಜನಾನಂದ ಸ್ವಾಮಿ ಪಾಲಿಟೆಕ್ನಿಕ್ ನ ಮೆಕ್ಯಾನಿಕಲ್ ವಿಭಾಗದ ಪ್ರಥಮ‌ ವರ್ಷದ ಡಿಪ್ಲೋಮ ವಿದ್ಯಾರ್ಥಿ ಸತೀಶ್ ಎಸ್. ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಅ.5 ರಿಂದ ಅ.7 ರವರೆಗೆ ತಾಂಗ್- ತಾ ಫೆಡರೇಷನ್ ಆಫ್ ಇಂಡಿಯದ ಸಹಕಾರದೊಂದಿಗೆ ನಡೆದ ಈ ಕ್ರೀಡಾಕೂಟದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿ ಈ ಸಾಧನೆ ಮಾಡಿ ರಾಜ್ಯಕ್ಕೆ ಕೀರ್ತಿ ತಂದಿದ್ದಾನೆ.
ಕಳೆದ ಸೆ.21 ಮತ್ತು 22 ರಂದು ವಿಜಯಪುರದಲ್ಲಿ ನಡೆದ 5ನೇ ರಾಜ್ಯಮಟ್ಟದ ಥಾಂಗ್ ತಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರು.
ಪೊಳಲಿ ಶ್ರೀರಾಮಕೃಷ್ಣ ತಪೋವನದಲ್ಲಿ ಪೊಳಲಿ ಸರಕಾರಿ ಪ್ರೌಡಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಯಂತ್ ಆಚಾರ್ಯ ಹಾಗೂ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮಕೂಟ್ಲು ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಸತೀಶ್ ಅವರ ಸಾಧನೆಗೆ ಪೊಳಲಿ ಶ್ರೀ ರಾಮಕೃಷ್ಣ ತಪೋವನದ ಶ್ರೀ ವಿವೇಕಾಚೈತನ್ಯನಂದ‌ ಸ್ವಾಮೀಜಿ ಅಭಿನಂದನೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು