6:03 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಮಾಜಿ ಪ್ರಧಾನಿ ದೇವೇಗೌಡರ ಭೇಟಿ: ಬೆಂಬಲಿಸಲು ಮನವಿ

11/07/2022, 10:16

ಬೆಂಗಳೂರು(reporterkarnataka.com): ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾನುವಾರ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರನ್ನು ಪದ್ಮನಾಭ ನಗರದ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮುರ್ಮು ಅವರು ತನ್ನ ಅಭ್ಯರ್ಥಿತನಕ್ಕೆ ಬೆಂಬಲಿಸುವಂತೆ ಮಾಜಿ ಪ್ರಧಾನಿಯಲ್ಲಿ ಮನವಿ ಮಾಡಿದರು. ಮುರ್ಮು ಅವರು ಆಗಮಿಸುವ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸೇರಿದಂತೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

ಭಾನುವಾರ ಮಧ್ಯಾಹ್ನ 3.30 ಗಂಟೆಗೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಮುರ್ಮು ಆಗಮಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವರು ಅವರನ್ನು ಸ್ವಾಗತಿಸುವರು.

ಬಳಿಕ ಸಂಜೆ 4.00 ಗಂಟೆಗೆ ಬೆಂಗಳೂರಿನ ಶಾಂಘ್ರಿಲಾ ಹೋಟೆಲ್‍ನಲ್ಲಿ ನಡೆಯುವ ಸಂಸದರು, ಸಚಿವರು ಮತ್ತು ಶಾಸಕರ ಸಭೆಯಲ್ಲಿ ಅವರು ಭಾಗವಹಿಸಿದರು. ಕೇಂದ್ರ ಸಚಿವರಾದ ಕಿಶನ್ ರೆಡ್ಡಿ, ಪ್ರಲ್ಹಾದ ಜೋಶಿ ಅವರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು