5:26 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸಿದ ಘಟನೆ: ಜೈಲಿನಲ್ಲೇ ವೈದ್ಯೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವಿಚಾರಣಾಧೀನ ಕೈದಿ

28/09/2022, 14:32

ಹೊಸದಿಲ್ಲಿ(reporterkarnataka.com): ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸಿದ ಘಟನೆ ನಡೆದಿದೆ. ಅತ್ಯಾಚಾರ ಆರೋಪಿಯಾಗಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿಯೊಬ್ಬ ಜೈಲು ಆವರಣದಲ್ಲೇ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ.

ಮಂಡೋಲಿ ಜೈಲಿನಲ್ಲಿ ಸೋಮವಾರ ವೈದ್ಯೆ ಎಲ್ಲ ಕೈದಿಗಳ ಆರೋಗ್ಯ ತಪಾಸಣೆ ನಡೆಸುವ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ವಿವರಿಸಿದ್ದಾರೆ.

ಕೈದಿ ಬಾತ್‍ರೂಂನಲ್ಲಿ ಅಡಗಿಕೊಂಡು, ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರಕ್ಕೂ ಯತ್ನಿಸಿದ. ಆದರೆ ವೈದ್ಯೆ ಆತನನ್ನು ಆಚೆಗೆ ತಳ್ಳಿ ಹೊರಕ್ಕೆ ಓಡಿಹೋಗುವಲ್ಲಿ ಯಶಸ್ವಿಯಾದರು. ತಕ್ಷಣ ಭದ್ರತಾ ಸಿಬ್ಬಂದಿಗೆ ವಿಷಯ ಮುಟ್ಟಿಸಿದರು. ಆತನನ್ನು ಬಂಧಿಸಲಾಯಿತು ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.

ಜೈಲು ಅಧಿಕಾರಿಗಳು ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕಾನೂನು ಕ್ರಮ ಆರಂಭಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ. ಭಾರತೀಯ ದಂಡಸಂಹಿತೆಯ ಸೂಕ್ತ ಸೆಕ್ಷನ್‍ಗಳ ಅನ್ವಯ ಹರ್ಷ ವಿಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಭವಿಷ್ಯದಲ್ಲಿ ಇಂಥ ಯಾವುದೇ ಘಟನೆಗಳು ನಡೆಯದಂತೆ ತಡೆಯಲು ಬರಾಕ್‍ಗಳ ಸುತ್ತ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ. ಆರೋಪಿ ಈ ಮುನ್ನ ಅತ್ಯಾಚಾರ ಪ್ರಕರಣವೊಂದರ ಸಂಬಂಧ ಜೈಲು ಸೇರಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು