10:48 PM Thursday18 - December 2025
ಬ್ರೇಕಿಂಗ್ ನ್ಯೂಸ್
ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ರಾಷ್ಟ್ರಧ್ಬಜವನ್ನು ಸೂರ್ಯಾಸ್ತದೊಳಗೆ ನಿಯಮಬದ್ಧವಾಗಿ ಮಡಚಿಡುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ

15/08/2022, 15:13

ಮಂಗಳೂರು(reporterkarnataka.com): ಸ್ವಾತಂತ್ರ್ಯದ ಆಚರಣೆಯು ಈಗಾಗಲೇ ಮುಗಿದಿದ್ದು, ಇಂದು ಸಂಜೆ ಸೂರ್ಯಾಸ್ತಮಾನದೊಳಗೆ ನಿಯಮಬದ್ಧವಾಗಿ ಸುರಕ್ಷಿತವಾಗಿ ಮಡಚಿಡುವಂತೆ ಎಲ್ಲಾ ಸಾರ್ವಜನಿಕರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಯಾರಿಗಾದರೂ ಧ್ವಜವನ್ನು ಸುರಕ್ಷಿತವಾಗಿ ಮನೆಯಲ್ಲಿ ಇಡಲು ಆಗದಿದ್ದರೆ ಅಥವಾ ಎಲ್ಲಿಯಾದರೂ ಧ್ವಜಗಳು ಸಿಕ್ಕಿದರೆ ಅದನ್ನು ಹತ್ತಿರದ ಸ್ಥಳೀಯಾಡಳಿತ ಅಥವಾ ಸರ್ಕಾರಿ ಕಚೇರಿಗೆ ತಲುಪಿಸಿ. ಧ್ವಜವನ್ನು ಹಾರಿಸುವಾಗ ಪಾಲಿಸಿದಂತೆ ಮತ್ತು ಇಂದು ಸಂಜೆ ಇಳಿಸುವಾಗಲೂ ಅದರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಅದರ ಘನತೆ ಎತ್ತಿ ಹಿಡಿಯಬೇಕು. ಧ್ವಜ ಇಳಿಸುವ ವೇಳೆ ಯಾವುದೇ ಕಾರಣಕ್ಕೂ ನೆಲಕ್ಕೆ, ನೀರಿಗೆ ತಾಗಿಸದೇ, ಬಣ್ಣಗಳು ಅದಲು ಬದಲು ಆಗದಂತೆ ನೋಡಿಕೊಳ್ಳಿ. ಧ್ವಜಗಳು ಯಾವುದೇ ರೂಪದಲ್ಲಿದ್ದರೂ ಅದನ್ನು ಸ್ಥಳೀಯ ಸರ್ಕಾರಿ ಕಚೇರಿ ಅಥವಾ ಸ್ಥಳೀಯಾಡಳಿತಕ್ಕೆ ತಲುಪಿಸಿ. ಯಾವುದೇ ಕಾರಣಕ್ಕೂ ಅದಕ್ಕೆ ಅಗೌರವ ತರಬೇಡಿ. ಜೊತೆಗೆ ಧ್ವಜಕ್ಕೆ ಅಗೌರವ ತರುವಂತಹ ಯಾವುದೇ ಫೋಟೋ-ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಬೇಡಿ. ಇದನ್ನು ಎಲ್ಲಾ ಪ್ರಜ್ಞಾವಂತ ನಾಗರಿಕರು ಪಾಲಿಸಬೇಕು ಎಂದು ಸೂಚನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು