4:48 AM Sunday22 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ಚುನಾವಣೆ: ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಕಾರ್ಯತಂತ್ರ

10/06/2022, 20:21

ಹೊಸದಿಲ್ಲಿ(reporterkarnataka.com): ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೊಸ ಕಾರ್ಯತಂತ್ರ ರೂಪಿಸಲು ಸಿದ್ಧತೆ ನಡೆಸಿದೆ. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹೊಸ ತಂತ್ರವನ್ನು ರೂಪಿಸುತ್ತಿದ್ದಾರೆ ಎನ್ನಲಾಗಿದೆ. ಇತರ ರಾಜಕೀಯ ಪಕ್ಷಗಳ ಮುಖ್ಯಸ್ಥರನ್ನು ಭೇಟಿ ಮಾಡಿರುವ ಕಾಂಗ್ರೆಸ್‌ ನಾಯಕಿ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚಿಸಿದ್ದಾರೆ. ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಸಿಪಿಐ(ಎಂ) ನಾಯಕ ಸೀತಾರಾಂ ಯೆಚೂರಿ ಸೇರಿದಂತೆ ಪ್ರತಿಪಕ್ಷ ನಾಯಕರನ್ನು ಸಂಪರ್ಕಿಸಿ ರಾಷ್ಟ್ರಪತಿ ಅಭ್ಯರ್ಥಿಗಳ ವಿಚಾರವಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ವಿರೋಧ ಪಕ್ಷಗಳೊಂದಿಗೆ ಮಾತುಕತೆ ನಡೆಸಿ ಮುಂದಿನ ರಾಷ್ಟ್ರಪತಿ ಅಭ್ಯರ್ಥಿಯಾಗಿ ಯಾರನ್ನು ನಾಮನಿರ್ದೇಶನ ಮಾಡಬೇಕು ಎಂಬ ಬಗ್ಗೆ ಒಮ್ಮತ ಮೂಡಿಸಲು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರೊಬ್ಬರು ಪ್ರತಿಕ್ರಿಯಿಸಿದ್ದು “ಎನ್‌ಡಿಎಯೇತರ ಹಾಗೂ ಯುಪಿಎಯೇತರ ಪಕ್ಷಗಳ ಮನಸ್ಥಿತಿಯನ್ನು ಕಂಡು ಹಿಡಿಯುವ ಕೆಲಸವನ್ನು ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲಾಗಿದೆ. ಅವರು ವಿರೋಧ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿ ಅಭ್ಯರ್ಥಿಗಳ ಸಂಭಾವ್ಯ ಹೆಸರುಗಳನ್ನು ಕಂಡುಹಿಡಿಯುತ್ತಾರೆ” ಎಂದಿರುವ ಕುರಿತು ಮೂಲಗಳು ವರದಿ ಮಾಡಿವೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ಅವರ ಅಧಿಕಾರಾವಧಿ ಜುಲೈ 24ರಂದು ಕೊನೆಗೊಳ್ಳಲಿದ್ದು ನೂತನ ರಾಷ್ಟ್ರಪತಿ ಆಯ್ಕೆಗೆ ಜುಲೈ 18ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಗುರುವಾರ ಘೋಷಿಸಿದೆ. ಚುನಾವಣೆಯಲ್ಲಿ ಒಟ್ಟು 4,809 ಮತದಾರರು ಮತ ಚಲಾಯಿಸಲಿದ್ದಾರೆ. ಯಾವುದೇ ರಾಜಕೀಯ ಪಕ್ಷವು ತನ್ನ ಸದಸ್ಯರಿಗೆ ವಿಪ್ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು