8:12 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಕೇಂದ್ರ ಸಚಿವ ಕುಮಾರಸ್ವಾಮಿ: ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಕೈಗೊಂಡಿರುವ ಉಪಕ್ರಮಗಳ ಬಗ್ಗೆ ವಿವರಣೆ

07/02/2025, 07:31

ನವದೆಹಲಿ(reporterkarnataka.com): ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಗೌರವಪೂರ್ವಕವಾಗಿ ಭೇಟಿಯಾದರು.
ತಮ್ಮ ಎರಡೂ ಇಲಾಖೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿಪರ ಕಾರ್ಯಕ್ರಮಗಳ ಬಗ್ಗೆ ಸಚಿವರು ರಾಷ್ಟ್ರಪತಿಗಳಿಗೆ ವಿವರಣೆ ನೀಡಿದರು.


ಪ್ರಧಾನಿಗಳ ಆತ್ಮನಿರ್ಭರ್ ಭಾರತ್, ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ವಿಕಸಿತ ಭಾರತ ಗುರಿಯನ್ನು ಮುಟ್ಟಲು ಕೈಗೊಳ್ಳಲಾಗಿರುವ ಸರ್ವ ಕ್ರಮಗಳ ಬಗ್ಗೆಯೂ ಸಚಿವರು ರಾಷ್ಟ್ರಪತಿಗಳಿಗೆ ಮಾಹಿತಿ ನೀಡಿದರು.
ರಾಷ್ಟ್ರದಲ್ಲಿ 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದ್ದು, ಆ ಹಿನ್ನಲೆಯಲ್ಲಿ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RINL) ಯ ಪುನಶ್ಚೇತನಕ್ಕೆ ₹11,400 ಕೋಟಿಗಳ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಬೋಕಾರೋ ಉಕ್ಕು ಸ್ಥಾವರದಲ್ಲಿ ಕೈಗೊಳ್ಳಲಾಗುತ್ತಿರುವ ₹20,000 ಕೋಟಿಗಳ ವಿಸ್ತರಣಾ ಯೋಜನೆಯ ಬಗ್ಗೆ ಕೂಡಾ ಸಚಿವರು ವಿವರಣೆ ನೀಡಿದರು.
ಬೃಹತ್ ಕೈಗಾರಿಕೆ ವಲಯದಲ್ಲಿ ತರಲಾಗಿರುವ ಸುಧಾರಣಾ ಕ್ರಮಗಳು ಹಾಗೂ ಪಿಎಂ ಇ ಡ್ರೈವ್ ಬಗ್ಗೆಯೂ ಸಚಿವರು ರಾಷ್ಟ್ರಪತಿಗಳಿಗೆ ವಿವರಣೆ ಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು