6:44 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಇಂದಿನಿಂದ ಡಿಸೆಂಬರ್ 20ರವರೆಗೆ ದೇಶಾದ್ಯಂತ ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹ

14/12/2024, 00:32

ಬೆಂಗಳೂರು(reporterkarnataka.com): ಇಂಧನ ದಕ್ಷತೆ ಮತ್ತು ಸಂರಕ್ಷಣೆಗೆ ರಾಜ್ಯ ನಿಯೋಜಿತ ಸಂಸ್ಥೆಆಗಿರುವ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ಇದೇ ಡಿಸೆಂಬರ್ 14ರಿಂದ 20ರವರೆಗೆ ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹವನ್ನು ಆಚರಿಸಲಿದೆ.
ಪ್ರತಿ ವರ್ಷ ಡಿಸೆಂಬರ್ 14 ರಂದು ದೇಶಾದ್ಯಂತ ಆಚರಿಸುವ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನ’ ಸಂದರ್ಭದಲ್ಲಿ ಇಂಧನ ದಕ್ಷತೆ ಮತ್ತು ಸುಸ್ಥಿರತೆಯನ್ನು ಉತ್ತೇಜಿಸುವ ರಾಜ್ಯದ ಬದ್ಧತೆಯನ್ನು ಒತ್ತಿ ಹೇಳಲು ಈ ಸಪ್ತಾಹದ ಆಚರಣೆ ಮಾಡಲಾಗುತ್ತಿದೆ.
ಕೇಂದ್ರದ ಇಂಧನ ಸಚಿವಾಲಯದ ಅಡಿ ಕಾರ್ಯ ನಿರ್ವಹಿಸುವ ‘ಇಂಧನ ದಕ್ಷತೆಯ ಬ್ಯೂರೋ’ (ಬಿಇಇ), ಇಂಧನ ಸಂರಕ್ಷಣೆ ಮತ್ತು ಸುಸ್ಥಿರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮಹತ್ವವನ್ನು ಸಾರುವ ಉದ್ದೇಶದಿಂದ ಎಲ್ಲ ರಾಜ್ಯಗಳಲ್ಲಿ ಇಂಧನ ಇಲಾಖೆ ವತಿಯಿಂದ ಸಪ್ತಾಹದ ಆಚರಣೆಯನ್ನು ಕಡ್ಡಾಯಗೊಳಿಸಿದೆ. ಪರಿಸರ ಹಾನಿ ಮತ್ತು ಹವಾಮಾನ ಬದಲಾವಣೆಯ ತುರ್ತು ಸವಾಲುಗಳನ್ನು ಎದುರಿಸುವ ದೇಶದ ಪ್ರಮುಖ ಧ್ಯೇಯದ ಭಾಗ ಈ ಆಚರಣೆ.
ಇಂಧನ ಸಂರಕ್ಷಣಾ ಸಪ್ತಾಹದ ಸಂದರ್ಭದಲ್ಲಿ ಇಂಧನ ಬಳಕೆಯ ಪ್ರಮಾಣ ತಗ್ಗಿಸುವುದು, ಇಂಧನದ ದಕ್ಷ ಬಳಕೆಯನ್ನು ಉತ್ತೇಜಿಸುವುದು ಮತ್ತು ರಾಜ್ಯದಲ್ಲಿ ಸುಸ್ಥಿರ ಅಭ್ಯಾಸಗಳನ್ನು ಬೆಳೆಸುವ ಬಗ್ಗೆ ಕ್ರೆಡಲ್‌ ಜಾಗೃತಿ ಮೂಡಿಸಲಿದೆ.
ಇಂಧನ ಸಂರಕ್ಷಣಾ ಸಪ್ತಾಹದ ಕುರಿತು ಮಾತನಾಡಿರುವ ಇಂಧನ ಸಚಿವ ಕೆ.ಜೆ. ಜಾರ್ಜ್, “ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹದಲ್ಲಿ ನಮ್ಮ ಇಲಾಖೆ ವತಿಯಿಂದ ವಾಕಥಾನ್‌ ಮತ್ತು ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಸ್ಪರ್ಧೆಗಳು ಸೇರಿದಂತೆ ಹಲವು ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಇಂಧನ ಸಂರಕ್ಷಣೆಯ ಮಹತ್ವದ ಬಗ್ಗೆ ವ್ಯಾಪಕವಾಗಿ ಜಾಗೃತಿ ಮೂಡಿಸುವ ಪ್ರಯತ್ನದ ಮೂಲಕ ಭವಿಷ್ಯದ ಪೀಳಿಗೆಗೆ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸಲು ಪ್ರೇರೇಪಿಸಲಾಗುತ್ತದೆ” ಎಂದಿದ್ದಾರೆ.
“ಹವಾಮಾನ ಬದಲಾವಣೆ ಇಂದಿನ ಕಾಲಮಾನದ ಅತ್ಯಂತ ಗಂಭೀರ ಸವಾಲುಗಳಲ್ಲಿ ಒಂದಾಗಿದೆ. ಪರಿಸರ ವ್ಯವಸ್ಥೆ, ಆರ್ಥಿಕತೆ ಮತ್ತು ನಮ್ಮ ಜೀವನೋಪಾಯದ ಮೇಲೆ ಇದು ಪರಿಣಾಮ ಬೀರುವುದರಿಂದ ಇಂಧನ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಈ ಗುರುತರ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯೋನ್ಮುಖವಾಗಿಸಲು ಈ ಸಪ್ತಾಹವು ಉತ್ತೇಜಿಸುತ್ತದೆ,”ಎಂದು
ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹೇಳಿದ್ದಾರೆ.
ಹಸಿರುಮನೆ ಅನಿಲ ಹೊರಸೂಸುವಿಕೆ, ಅರಣ್ಯನಾಶ ಮತ್ತು ಮಾಲಿನ್ಯದಂತಹ ಸವಾಲುಗಳನ್ನು ಎದುರಿಸಲು ರಾಜ್ಯವ್ಯಾಪಿ ಆಂದೋಲನ ನಡೆಸುವ ಅಗತ್ಯವನ್ನು ಒತ್ತಿ ಹೇಳಿದ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ, ಇಂಧನ ಸಂರಕ್ಷಣಾ ಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಖಾತ್ರಿಗಾಗಿ ವಿವಿಧ ಸಂಸ್ಥೆಗಳು ಮತ್ತು ಇಲಾಖೆಗಳು ಸೂಕ್ತವಾದ ಕ್ರಿಯಾ ಯೋಜನೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಕರೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು