5:12 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಲೋಕ್ ಅದಾಲತ್: 14,840 ಪ್ರಕರಣಗಳು ಇತ್ಯರ್ಥ; 17. 97 ಕೋಟಿ ರೂ.ಪರಿಹಾರ ವಸೂಲು

09/09/2023, 22:31

ಮಂಗಳೂರು(reporterkarnataka.com): ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘ರಾಷ್ಟ್ರೀಯ ಲೋಕ್ ಅದಾಲತ್’ ಕಾರ್ಯಕ್ರಮವನ್ನು ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.

ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 48 ಬೈಠಕ್‍ಗಳು ನಡೆದವು. ಅದಾಲತ್‍ನಲ್ಲಿ ಒಟ್ಟು 21,763 ಪ್ರಕರಣಗಳು ಪರಿಗಣಿಸಲಾಗಿತ್ತು; ಅದರಲ್ಲಿ 14,840 ಪ್ರಕರಣಗಳು ರಾಜಿಯಾಗಿದ್ದು, ರಾಜಿ ಮೊತ್ತ ಒಟ್ಟು 17,97,64,778 ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಹಾಗೂ ನ್ಯಾಯಾಧೀಶರಾದ ರವೀಂದ್ರ ಎಂ ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜಿ. ಅವರು ತಿಳಿಸಿದರು.
ಈ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.
ಈ ಅದಾಲತ್‍ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯಗಳು/ಪ್ರಕರಣಗಳು ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೇ ಇತ್ಯರ್ಥಗೊಳಿಸಿಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರುಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು