7:35 AM Thursday1 - January 2026
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಲೋಕ್ ಅದಾಲತ್: 14,414 ಪ್ರಕರಣಗಳು ಇತ್ಯರ್ಥ; 24,07,34,762 ರೂ. ಪರಿಹಾರ ವಸೂಲು

12/02/2023, 12:42

ಮಂಗಳೂರು(reporterkarnataka.com): ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಶನಿವಾರ ‘ರಾಷ್ಟ್ರೀಯ ಲೋಕ್ ಅದಾಲತ್’ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ನಡೆಯಿತು.

ಒಟ್ಟು 47 ಬೈಠಕ್‍ಗಳು ನಡೆದವು. ಅದಾಲತ್‍ನಲ್ಲಿ ಒಟ್ಟು 21,018 ಪ್ರಕರಣಗಳು ಪರಿಗಣಿಸಲಾಗಿತ್ತು; ಅದರಲ್ಲಿ 14,414 ಪ್ರಕರಣಗಳು ರಾಜಿಯಾಗಿದ್ದು, ರಾಜಿ ಮೊತ್ತ ಒಟ್ಟು 24,07,34,762 ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಹಾಗೂ ನ್ಯಾಯಾಧೀಶರಾದ ರವೀಂದ್ರ ಎಂ ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜಿ. ಅವರು ತಿಳಿಸಿದರು.
ಈ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.


ಈ ಅದಾಲತ್‍ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯಗಳು/ಪ್ರಕರಣಗಳು ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೇ ಇತ್ಯರ್ಥಗೊಳಿಸಿಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರುಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು