11:46 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಲೋಕ್ ಅದಾಲತ್: 19,666 ಪ್ರಕರಣಗಳುಇತ್ಯರ್ಥ; 22,19,35,765 ಕೋಟಿ ರೂ. ಪರಿಹಾರ ವಸೂಲು

11/07/2023, 16:38

ಮಂಗಳೂರು(reporterkarnataka.com): ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘ರಾಷ್ಟ್ರೀಯ ಲೋಕ್ ಅದಾಲತ್’ ಕಾರ್ಯಕ್ರಮವನ್ನು ಜು.8ರ ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 50 ಬೈಠಕ್‍ಗಳು ನಡೆದವು. ಅದಾಲತ್‍ನಲ್ಲಿ ಒಟ್ಟು 24,303 ಪ್ರಕರಣಗಳು ಪರಿಗಣಿಸಲಾಗಿತ್ತು. ಅದರಲ್ಲಿ 19,666 ಪ್ರಕರಣಗಳು ರಾಜಿಯಾಗಿದ್ದು, ರಾಜಿ ಮೊತ್ತ ಒಟ್ಟು 22,19,35,765 ಕೋಟಿ ರೂ.ಗಳ ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಹಾಗೂ ನ್ಯಾಯಾಧೀಶರಾದ ರವೀಂದ್ರ ಎಂ ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜಿ. ಅವರು ತಿಳಿಸಿದರು.
ಈ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.
ಅದಾಲತ್‍ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯಗಳು/ಪ್ರಕರಣಗಳು ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೇ ಇತ್ಯರ್ಥಗೊಳಿಸಿಕೊಂಡರು.
ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು