6:10 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಮಟ್ಟದ ಕಬಡ್ಡಿಗೆ ಆಯ್ಕೆಯಾದ ಮಂಗಳೂರು ವಿವಿ ಆಟಗಾರರರಿಗೆ ಪ್ರತಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅಭಿನಂದನೆ

10/12/2022, 19:21

ಮಂಗಳೂರು(reporterkarnataka.com):
ಬೆಂಗಳೂರಲ್ಲಿ ಜರಗಿದ ದಕ್ಷಿಣ ಭಾರತ ಅಂತರ್ ವಿಶ್ವ ವಿದ್ಯಾಲಯ ಕಬಡ್ಡಿ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದು ರೋತಕ್ ಹರಿಯಾಣದಲ್ಲಿ ನಡೆಯುವ ಅಖಿಲ ಭಾರತ ಅಂತರ್ ವಿಶ್ವ ವಿದ್ಯಾಲಯ ಕಬಡ್ಡಿ ಪಂದ್ಯಾಟಕ್ಕೆ ಅರ್ಹತೆ ಗಳಿಸಿದ ಮಂಗಳೂರು ವಿಶ್ವ ವಿದ್ಯಾನಿಲಯ ತಂಡದ ಎಲ್ಲ ಆಟಗಾರರಿಗೆ ಪ್ರತಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅಭಿನಂದನೆ ಸಲ್ಲಿಸಿದ್ದಾರೆ.

ಸುಮಾರು 80 ತಂಡಗಳು ಭಾಗವಹಿಸಿದ್ದ ಪಂದ್ಯಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಮಂಗಳೂರು ವಿಶ್ವವಿದ್ಯಾನಿಲಯ ತಂಡದ ಎಲ್ಲ ಆಟಗಾರರು,ಮುಖ್ಯವಾಗಿ ತಂಡದ ಪ್ರಮುಖ ಆಟಗಾರರಾದ ಉಳ್ಳಾಲದ ಸಾಯಿ, ದೈಹಿಕ ಶಿಕ್ಷಕರಾದ ಜೆರಾಲ್ಡ್ ಹಾಗೂ ಉಮಾ ಮಹೇಶ್ವರಿ ತೊಕ್ಕೋಟು ಇದರ ಗೋಪಿ ಅವರಿಗೆ ಅಭಿನಂದನೆ ಹಾಗೂ ಶುಭಾಶಯಗಳನ್ನು ಯು.ಟಿ.ಖಾದರ್ ಸಲ್ಲಿಸಿದರು.

ದಕ್ಷಿಣ ವಲಯ ಹಾಗೂ ಉತ್ತರ ವಲಯದ ತಲಾ ನಾಲ್ಕು ತಂಡಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೆಣಸಾಡಲಿದ್ದು,ಮಂಗಳೂರು ವಿಶ್ವವಿದ್ಯಾನಿಲಯ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಗಳಿಸಲಿ ಎಂದು ಶಾಸಕ ಯು.ಟಿ.ಖಾದರ್ ರವರು ಈ ಸಂದರ್ಭದಲ್ಲಿ ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು