9:57 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವ: ಪುತ್ತೂರು ಕುಡಿಪ್ಪಾಡಿ ಸರಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ 

03/10/2021, 23:21

ಪುತ್ತೂರು(reporterkarnatakanews): ಗಾಂಧಿ ಜಯಂತಿಯ ಪ್ರಯುಕ್ತ ಪುತ್ತೂರು ವಿವೇಕಾನಂದ ಕಾಲೇಜಿನ  ರಾಷ್ಟ್ರೀಯ ಸೇವಾ ಯೋಜನೆ, ರೆಡ್ ಕ್ರಾಸ್, ಗ್ರಾಮ ವಿಕಸನ ಸಮಿತಿ ಸಹಾಯದೊಂದಿಗೆ ಕುಡಿಪ್ಪಾಡಿಯ ದ.ಕ. ಜಿಪಂ ಉ. ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು  

ಕಾರ್ಯಕ್ರಮವು ಸರ್ವಧರ್ಮ ಪ್ರಾರ್ಥನೆಯ ಮೂಲಕ ಪ್ರಾರಂಭವಾಯಿತು. ಬಂದಿರುವ ಎಲ್ಲಾ ಅತಿಥಿಗಳು ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿಸಲಾಯಿತು.

ಕೆಲವು  ವಿದ್ಯಾರ್ಥಿಗಳು ಗಾಂಧೀಜಿ ಯವರ ಜೀವನ ಶೈಲಿಯ ಬಗ್ಗೆ ಭಾಷಣಗಳನ್ನು ಮಂಡಿಸಿದರು.

ಕಾರ್ಯಕ್ರಮದ ಅತಿಥಿಗಳು ಗಾಂಧೀಜಿಯ ಜೀವನದ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಾರಿ ಹೇಳಿದರು


ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಗೋಮುಖ ವಹಿಸಿದ್ದರು.

ಅತಿಥಿಗಳಾಗಿ ರಾಮ  ಜೋಹಿಷರು (ಗೌರವ ಅಧ್ಯಕ್ಷರು ಕುಡಿಪ್ಪಾಡಿ ಶಾಲೆ ಮತ್ತು ಉಪಾಧ್ಯಕ್ಷರು ಗ್ರಾಮವಿಕಾಸನ ಸಮಿತಿ) ಅವರು ವಹಿಸಿದ್ದರು. 

ಈ ಸಂದರ್ಭದಲ್ಲಿ  ವಿವೇಕಾನಂದ ಕಾಲೇಜಿನ ಉಪನ್ಯಾಸಕರು, ಕುಡಿಪ್ಪಾಡಿ ಶಾಲೆಯ ಶಿಕ್ಷಕರು ಗ್ರಾಮ ಸಮಿತಿಯ ಸದಸ್ಯರು, ಗ್ರಾಮಸ್ಥರು, ಮಕ್ಕಳು, ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು, ರೆಡ್ ಕ್ರಾಸ್ ಸಂಸ್ಥೆ ಸ್ವಯಂ ಸೇವಕರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಹಾಗೂ ಸ್ವಾಗತವನ್ನು ಕುಡಿಪ್ಪಾಡಿ ಶಾಲೆಯ ಮುಖ್ಯೋಪಾಧ್ಯಾಯಿನಿ  ವಿಜಯ ಪಿ ನೆರವೇರಿಸಿದರು. ಸಭಾ ಕಾರ್ಯಕ್ರಮದ ನಂತರ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು, ರೆಡ್ ಕ್ರಾಸ್ ಸ್ವಯಂ ಸೇವಕರು ಗ್ರಾಮಸ್ಥರು ಮತ್ತು ಮಕ್ಕಳು ಸ್ವಚ್ಛತಾ ಕಾರ್ಯಕ್ರಮ ಮತ್ತು  ಗಿಡ ನೆಡುವ ಕಾರ್ಯ ವನ್ನು ಹಮ್ಮಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು