ಇತ್ತೀಚಿನ ಸುದ್ದಿ
ರಾಷ್ಟ್ರೀಯ ಶಿಕ್ಷಣ ನೀತಿ ರದ್ದು: ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಎನ್ ಎಸ್ ಯುಐ ಸಂಭ್ರಮಾಚರಣೆ
08/07/2023, 22:13
ಮಂಗಳೂರು(reporterlarnataka.com):ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಕರ್ನಾಟಕ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ (NEP) ಯನ್ನು ರದ್ದುಗೊಳಿಸಿರುವುದನ್ನು ಬೆಂಬಲಿಸಿ ನಗರದ ಮಲ್ಲಿಕಟ್ಟೆಯ ಇಂದಿರಾ ಭವನದ ಮುಂಭಾಗದಲ್ಲಿ ಸಂಭ್ರಮಾಚರಣೆ ಮಾಡಲಾಯಿತು.
ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಸಿಹಿತಿಂಡಿ ಹಂಚಿ, ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಲಾಯಿತು.
ಈ ಸಂದರ್ಭದಲ್ಲಿ ಎನ್ ಎಸ್ ಯುಐ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.