3:21 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪ್ರೋತ್ಸಾಹ ಧನ 1ರಿಂದ 2 ಲಕ್ಷಕ್ಕೆ ಹೆಚ್ಚಳ: ಸಮಾಜ ಕಲ್ಯಾಣ ಸಚಿವ ಡಾ ಎಚ್. ಸಿ. ಮಹದೇವಪ್ಪ

10/11/2024, 10:55

ಬೆಂಗಳೂರು(reporterkarnataka.com): IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್. ಸಿ. ಮಹದೇವಪ್ಪ ತಿಳಿಸಿದ್ದಾರೆ.
ಇನ್ನು ಪಿಯುಸಿ ಪರೀಕ್ಷೆಯಲ್ಲಿ 95 ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್ ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂಪಾಯಿಗಳ ಶುಲ್ಕ ಧನವನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ.
ಎಂಬಿಬಿಎಸ್ ಪದವಿಯನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ 60% ಗೂ ಹೆಚ್ಚಿನ ಅಂಕಗಗಳನ್ನು ಪಡೆದು ಉತ್ತೀರ್ಣ ರಾದರೆ ಅವರಿಗೆ ಅವರಿಗೆ ಮತ್ತೆ 25 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡಲಾಗುವುದು.
ಶಿಕ್ಷಣವೇ ಸಮಾಜವನ್ನು ಬದಲಿಸುವ ಕೀಲಿಕೈ ಎಂಬ ಅಂಶವನ್ನು ಮನಗಂಡು ಈ ಒಂದು ಮಹತ್ವದ ಘೋಷಣೆಯನ್ನು ಸರ್ಕಾರವು ಮಾಡಿದ್ದು, ಇದರಿಂದ ಉನ್ನತ ಶಿಕ್ಷಣ ಮಾಡಬೇಕೆಂಬ ವಿದ್ಯಾರ್ಥಿಗಳ ಕನಸ್ಸು ನನಸಾಗಲಿದೆ.
ಐಐಟಿ ಐಐಎಂ ನಂತಹ ಶಿಕ್ಷಣ ಸಂಸ್ಥೆಗಳಲ್ಲಿ ಓದುವಂತಹ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ದೇಶ ನಿರ್ಮಾಣದಲ್ಲಿ ಸಕ್ರಿಯವಾಗಿ ತೊಡಗಬೇಕು, ಆ ಮೂಲಕ ಸಮೃದ್ಧ ಮತ್ತು ಸಶಕ್ತ ರಾಷ್ಟ್ರದ ನಿರ್ಮಾಣವಾಗಬೇಕು ಎಂದು ಮಾನ್ಯ ಸಚಿವರು ತಿಳಿಸಿದರು.
ಇನ್ನು ಬಡತನದ ಬೇಗೆಗೆ ಸಿಲುಕಿ ಎಂಬಿಬಿಎಸ್ ಓದುವ ಬಯಕೆ ಇರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರಿ ಕೋಟಾದಡಿ ಸೀಟು ಸಿಗದೇ ಅವರು ಖಾಸಗೀ ಸಂಸ್ಥೆಗಳಲ್ಲಿ ಓದುತ್ತಿದ್ದರೆ, ಅಂತಹ ಪ್ರತಿಭಾವಂತ ಮಕ್ಕಳ ಶುಲ್ಕವನ್ನು ಸರ್ಕಾರ ಭರಿಸಲಿದ್ದು, ಇದಕ್ಕಾಗಿ ಆರಂಭಿಕವಾಗಿ 25 ಲಕ್ಷ ರೂಪಾಯಿಗಳನ್ನು ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ.
ಈಗಾಗಲೇ ಪ್ರಬುದ್ಧ ಯೋಜನೆಯಡಿ ವಿದೇಶಿ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿರುವ ನಮ್ಮ ಸರ್ಕಾರವು ಇದೀಗ ಮಕ್ಕಳ ಉತ್ತಮ ಶಿಕ್ಷಣವನ್ನು ಗಮನದಲ್ಲಿಟುಕೊಂಡು ಮುಖ್ಯ ಘೋಷಣೆಯನ್ನು ಮಾಡಿರುತ್ತದೆ.
ಹೀಗಾಗಿ ಬಾಬಾ ಸಾಹೇಬರ ಆಶಯದಂತೆ ನಮ್ಮೆಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಹೆಚ್ಚು ಆಸಕ್ತಿ ಹೊಂದಿ, ಶ್ರಮ ಹಾಕಿ ಓದಬೇಕೆಂದು ಮಾನ್ಯ ಸಚಿವರು ಆಶಯವನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು