ಇತ್ತೀಚಿನ ಸುದ್ದಿ
ರಾತ್ರಿ ಮದ್ಯ ಸೇವಿಸಿ ವ್ಯಕ್ತಿ ಬೆಳಗ್ಗೆ ಸಾವು: ಬಾರ್ ಮುಂದೆ ಶವವಿಟ್ಟು ಪ್ರತಿಭಟನೆ
04/01/2023, 13:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka.com
ರಾತ್ರಿ ಮದ್ಯ ಸೇವಿಸಿ ವ್ಯಕ್ತಿ ಬೆಳಗ್ಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಬಾರ್ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ತರೀಕೆರೆ ತಾಲೂಕಿನ ಕರಕುಚ್ಚಿ ಕಾಲೋನಿಯಲ್ಲಿ ನಡೆದಿದೆ.
ಮಂಜುನಾಥ್ (29) ಮೃತ ದುರ್ದೈವಿ. ಕಳೆದ ರಾತ್ರಿ ಮದ್ಯ ಸೇವಿಸಿದ್ದ ಮಂಜುನಾಥ್ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಈ ಬಾರಿನಲ್ಲಿ ಕುಡಿದಿದ್ದರಿಂದಲೇ ಮಂಜುನಾಥ್ ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ಹಿಂದೆಯೂ ಇದೇ ರೀತಿ ಮೂರ್ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕೂಡಲೇ ಬಾರ್ ಮುಚ್ಚುವಂತೆ ಸ್ಥಳಿಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾರ್ ಮಾಲೀಕನ ಮೇಲೆ ಕುಟುಂಬಸ್ಥರು, ಸಂಬಂಧಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ಬಾರ್ ಮುಚ್ಚುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ.