ಇತ್ತೀಚಿನ ಸುದ್ದಿ
ರಾಯಚೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಉಪ ನಿರ್ದೇಶಕರಾಗಿ ವೀರನಗೌಡ ಪಾಟೀಲ್ ಅಧಿಕಾರ ಸ್ವೀಕಾರ
17/07/2021, 15:47
ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com
ರಾಯಚೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಪ್ರಭಾರಿ ಹುದ್ದೆಯಲ್ಲಿರುವ ವೀರನಗೌಡ ಪಾಟೀಲ್ ಅವರು ಕಾಯಂ ಉಪ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು.
ಅದೇ ರೀತಿ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿದ್ದ ಶರಣಮ್ಮ ಕಾರನೂರ ಇಲಾಖೆಯ ಕಾರ್ಯಕ್ರಮದ ನಿರೂಪಣ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾವಿನಬಾವಿ ಗ್ರಾಮ ಪಂಚಾಯಿತಿ ಸದಸ್ಯರಾದ ಶರಣ ಗೌಡ, ಮಾಲಿ ಪಾಟೀಲ, ಕಾಂಗ್ರೆಸ್ ಮುಖಂಡ ರುದ್ರಗೌಡ,ಮಾವಿನಬಾವಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮೇಲ್ವಿಚಾರಕರು, ಸಿಬ್ಬಂದಿ ವರ್ಗ ಇತರರಿದ್ದರು ಹಾಜರಿದ್ದರು.