10:57 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ರಾಯಚೂರು: ಮತ್ತೋರ್ವ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಬಂಧನ

12/02/2025, 10:49

ಶಿವು ರಾಠೋಡ ಹುಣಸಗಿ ರಾಯಚೂರು

Info.reporterkarnata@gmail.com

ಚಾಕಲೇಟ್ ಕೊಡುವೆ ಎಂದು ಪುಸಲಾಯಿಸಿ ಬುದ್ದಿಮಾಂದ್ಯ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಪಟ್ಟಣದಲ್ಲಿ ನಡೆದಿದೆ.
ಅತ್ಯಾಚಾರಿ ಆರೋಪಿ ಚಂದ್ರಶೇಖರ್ ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಬಾಲಕಿಯು ಪಟ್ಟಣದ ಬಸವ ಸಮಿತಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಳು. ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಚಾಕೊಲೇಟ್ ತೆಗೆದುಕೊಂಡು ಬರಲು ಬಾಲಕಿ ಅಂಗಡಿಗೆ ಹೋದಾಗ ಆರೋಪಿಯು ನಾನು ಚಾಕೊಲೇಟ್ ಕೊಡುವೆನೆಂದು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ.
ಆರೋಪಿಯು ಬಾಲಕಿಯನ್ನು ಕರೆದುಕೊಂಡು ಹೋಗಿ ಮಗುವಿನ ಜತೆ ಅಶ್ಲೀಲವಾಗಿ ಮಾತನಾಡುತ್ತಿರುವುದನ್ನು ಗಮನಿಸಿ ಪಕ್ಕದ ಮನೆಯವರು ಸಂಶಯಪಟ್ಟು ಹೊರಗೆ ಹೋಗಿ ನೋಡಿದ್ದಾರೆ. ಅತ್ಯಾಚಾರಕ್ಕೆ ಯತ್ನಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಗಾಡಿದ ಬಳಿಕ ಜನ ಸೇರಿದ್ದು, ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಗುವನ್ನು ರಕ್ಷಿಸಿ, ಆರೋಪಿಯನ್ನು ಬಂಧಿಸಿದ್ದಾರೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದ ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ನಡೆದ ಘಟನೆ ಮಾಸುವ ಮುನ್ನವೇ ಇನ್ನೊಂದು ಪೈಶಾಚಿಕ ಘಟನೆ ನಡೆದಿದೆ. ಆದರೂ ಪೊಲೀಸರು ಕಠಿಣ ಕ್ರಮ ಜರುಗಿಸುತ್ತಿಲ್ಲ. ಇಂತಹ ಆರೋಪಿಗಳಿಗೆ ಗಲ್ಲುಶಿಕ್ಷೆ ನೀಡಬೇಕು. ಇಲ್ಲದಿದ್ದರೆ ಇನ್ನೆಷ್ಟು ಮಕ್ಕಳ ಜೀವ ಹೋಗುವುದೋ ಕಳೆ ಯಬೇಕು ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು