8:07 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

05/06/2025, 20:21

ಬೆಂಗಳೂರು(reporterkarnataka.com): ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ನಡೆದಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ದುರ್ಘಟನೆ ವಿಷಯದಲ್ಲಿ ರಾಜಕಾರಣ ನಡೆಸುವುದು ಸರಿಯಲ್ಲ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಈ ದುರಂತವನ್ನು ಯಾರೂ ನಿರೀಕ್ಷಿಸಲು ಸಾಧ್ಯವಿಲ್ಲ. ಘಟನೆಯು ನಡೆಯಬಾರದಿತ್ತು. ನಡೆದು ಹೋಗಿದೆ. ಇದಕ್ಕಾಗಿ ಸರ್ಕಾರ ತೀವ್ರ ದುಃಖ ವ್ಯಕ್ತಪಡಿಸುತ್ತದೆ ಎಂದು ಹೇಳಿದರು.

* *ರಾಜಕೀಯ ಬೇಳೆ ಬೇಯಿಸಿಕೊಳ್ಳಬಾರದು:*
ಈಗ ದುರಂತ ನಡೆದ ಬಗ್ಗೆ ಚರ್ಚೆ ಮಾಡುವ ಸಮಯವಲ್ಲ. ಯಾರು ದುಃಖದಲ್ಲಿದ್ದಾರೆ, ಅವರಿಗೆ ಸಾಂತ್ವನ ಹೇಳುವುದು ಮುಖ್ಯ. ಈ ವಿಚಾರದಲ್ಲಿ ಯಾರೇ ರಾಜಕಾರಣ ಮಾಡಿದರೂ ತಪ್ಪು. ರಾಜ್ಯದ ಜನರಿಗೆ, ಅದರಲ್ಲೂ ಯಾರು ದುಃಖದಲ್ಲಿದ್ದಾರೆ, ಅವರಿಗೆ ಸಾಂತ್ವಾನ ಹೇಳುವ ಕೆಲಸ ಆಗಬೇಕು. ಈ ವಿಷಯದಲ್ಲಿ ಯಾರೂ ರಾಜಕೀಯ ಬೇಳೆ ಬೇಯಿಸಿಕೊಳ್ಳಬಾರದು ಎಂದು ನುಡಿದರು.

* *ಕೊಲೆಯೆಂದು ಬಿಂಬಿಸುವುದು ಸರಿಯಲ್ಲ:*
ವಿಜಯೋತ್ಸವದ ವೇಳೆ ಸಂಭವಿಸಿರುವ ಘಟನೆ ಅಚಾನಕ್ಕಾಗಿ ನಡೆದಿರುವುದು. ಘಟನೆಯ ಬಗ್ಗೆ ಎಲ್ಲರಿಗೂ ಅತ್ಯಂತ ನೋವು ಇದೆ. ಆದರೆ, ಇದೊಂದು ಸರ್ಕಾರದ ಕೊಲೆಯೆಂದು ಬಿಂಬಿಸುವುದು ಸರಿಯಲ್ಲ. ಈ ರೀತಿ ಘಟನೆ ಆಗಲಿ ಎಂದು ನಾವಾಗಲಿ, ನೀವಾಗಲಿ ಯಾರಾದರೂ ಬಯಸಬಹುದಾ ಎಂದು ಸಚಿವರು ಪ್ರಶ್ನಿಸಿದರು.
ಘಟನೆಯ ಜವಾಬ್ದಾರಿಯ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ನಾವೆಲ್ಲರೂ ಜವಾಬ್ದಾರಿ ಸ್ಥಾನದಲ್ಲಿ ಇರುವವರು. ಅತ್ಯಂತ ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದು ಹೇಳಿದರು.

* *ಮೃತರ ಕುಟುಂಬಗಳಿಗೆ ಸಾಂತ್ವಾನ:*
ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗ, ವಾರಸುದಾರರಿಗೆ, ಪೋಷಕರಿಗೆ ಸಾವಿನ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರಲ್ಲದೆ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಅವರು ಆಶಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು