8:42 PM Thursday10 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ ವಹಿವಾಟು; 49.62 ಕೋಟಿ ಲಾಭ

10/09/2026, 20:36

ಮಂಗಳೂರು(reporterkarnataka.com):ಪ್ರತಿಷ್ಠಿತ ಬಹುರಾಜ್ಯ ಸಹಕಾರಿ ಸಂಸ್ಥೆಯಾದ ‘ದ ಕ್ಯಾಂಪ್ಕೊ ಲಿಮಿಟೆಡ್’ 2025-26ನೇ ಸಾಲಿನಲ್ಲಿ ₹3,735 ಕೋಟಿ ಒಟ್ಟು ವ್ಯವಹಾರ ವಹಿವಾಟು ಮತ್ತು ₹49.62 ಕೋಟಿ ತೆರಿಗೆಪೂರ್ವ ಲಾಭ ದಾಖಲಿಸಿದೆ.
ಅಡಿಕೆ ಮಾರುಕಟ್ಟೆಯಲ್ಲಿನ ಏರಿಳಿತ ಮತ್ತು ಕೊಕ್ಕೊ ವಲಯದ ಸವಾಲುಗಳ ನಡುವೆಯೂ ಸಂಸ್ಥೆಯ ನಿರಂತರ ಆರ್ಥಿಕ ಶಕ್ತಿ ಹಾಗೂ ಬೆಳೆಗಾರರ ಹಿತಾಸಕ್ತಿಯನ್ನು ಪರಿಗಣಿಸಿ ಸದಸ್ಯರಿಗೆ ಶೇ. 14ರಷ್ಟು ಡಿವಿಡೆಂಡ್ ನೀಡಲು ನಿರ್ದೇಶಕ ಮಂಡಳಿ ಶಿಫಾರಸು ಮಾಡಿದೆ ಎಂದು ಸಂಸ್ಥೆಯ ಅಧ್ಯಕ್ಷ ಸತೀಶ್ಚಂದ್ರ ಎಸ್. ಆರ್. ತಿಳಿಸಿದ್ದಾರೆ.
ನಗರದ ಕ್ಯಾಂಪ್ಕೊ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಕಳೆದ ಆರ್ಥಿಕ ವರ್ಷದಲ್ಲಿ ಸಂಸ್ಥೆಯು ಒಟ್ಟು ₹2,924.32 ಕೋಟಿ ಮೌಲ್ಯದ 58,742.76 ಮೆ.ಟನ್ ಅಡಿಕೆ ಖರೀದಿಸಿದ್ದು, ₹2,985.19 ಕೋಟಿ ಮೌಲ್ಯದ 59,088.64 ಮೆ.ಟನ್ ಅಡಿಕೆ ಮಾರಾಟ ಮಾಡಿದೆ. ದೇಶೀಯ ಮಾರುಕಟ್ಟೆಗೆ ಹೆಚ್ಚುತ್ತಿರುವ ಆಮದು ಅಡಿಕೆಯ ಒಳಹರಿವು ಮತ್ತು ಸ್ಥಳೀಯ ಉತ್ಪನ್ನದೊಂದಿಗೆ ಮಿಶ್ರಣ ಮಾಡುತ್ತಿರುವ ಸಂಚಿನ ಬಗ್ಗೆ ಕ್ಯಾಂಪ್ಕೊ ಗಂಭೀರ ಕಳವಳ ವ್ಯಕ್ತಪಡಿಸಿದ್ದು, ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೆ ತರಲಾಗಿದೆ. ಉತ್ತರ ಪ್ರದೇಶದಲ್ಲಿ ಅಡಿಕೆ ವಹಿವಾಟಿನ ಮೇಲೆ ವಿಧಿಸುತ್ತಿರುವ ಮಂಡಿ ತೆರಿಗೆಯನ್ನು ಹಿಂಪಡೆಯುವಂತೆಯೂ ಕೇಂದ್ರ ಹಣಕಾಸು ಸಚಿವರಿಗೆ ಮನವಿ ಸಲ್ಲಿಸಲಾಗಿದೆ.
ಕೊಕ್ಕೊ ಹಾಗೂ ಚಾಕೊಲೇಟ್ ವಿಭಾಗದಲ್ಲಿ ₹488.65 ಕೋಟಿ ಮೌಲ್ಯದ ಉತ್ಪನ್ನಗಳು ಮಾರಾಟವಾಗಿವೆ. ಚಾಕೊಲೇಟ್ ಕಾರ್ಖಾನೆಯು ಒಟ್ಟು 12,606.40 ಮೆ.ಟನ್ ಉತ್ಪಾದನೆ ಮಾಡಿದ್ದು, ಪ್ರೀಮಿಯಂ ಚಾಕೊಲೇಟ್ ಶ್ರೇಣಿಯು ಈಗ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಲಭ್ಯವಿದೆ. ಇದರೊಂದಿಗೆ ರಬ್ಬರ್ ವಿಭಾಗದಲ್ಲಿ ₹33.67 ಕೋಟಿ ಹಾಗೂ ಕಾಳುಮೆಣಸು ವಿಭಾಗದಲ್ಲಿ ₹134.27 ಕೋಟಿ ಮೌಲ್ಯದ ಮಾರಾಟ ದಾಖಲಾಗಿದೆ.
ಬೆಳೆಗಾರರ ಕಲ್ಯಾಣಕ್ಕಾಗಿ ವಿವಿಧ ವೈದ್ಯಕೀಯ ಚಿಕಿತ್ಸೆ ಮತ್ತು ಅಪಘಾತ ಪರಿಹಾರ ಯೋಜನೆಗಳಡಿ 120 ಫಲಾನುಭವಿಗಳಿಗೆ ಒಟ್ಟು ₹86.42 ಲಕ್ಷ ಆರ್ಥಿಕ ನೆರವು ನೀಡಲಾಗಿದೆ. ಡಿಜಿಟಲ್ ಪರಿವರ್ತನೆಯ ಭಾಗವಾಗಿ ‘ಕ್ಯಾಂಪ್ಕೊ ಕಿಸಾನ್ ಮಿತ್ರ’ ಮೊಬೈಲ್ ಆ್ಯಪ್ ಮತ್ತು ‘ಕ್ಯಾಂಪ್ಕೊ ಕಾರ್ಟ್’ ಆನ್‌ಲೈನ್ ಶಾಪಿಂಗ್ ವೇದಿಕೆಯನ್ನು ಯಶಸ್ವಿಯಾಗಿ ಲೋಕಾರ್ಪಣೆಗೊಳಿಸಲಾಗಿದೆ. ಪರಿಸರ ಸ್ನೇಹಿ ಕ್ರಮಗಳಡಿಯಲ್ಲಿ ಪವನ ಮತ್ತು ಸೌರ ವಿದ್ಯುತ್ ಯೋಜನೆಗಳ ಮೂಲಕ ಕಾರ್ಖಾನೆಯ ಇಂಧನ ಅಗತ್ಯದ ಬಹುಭಾಗವನ್ನು ಪೂರೈಸಿಕೊಳ್ಳಲಾಗುತ್ತಿದೆ.
ಮಾರ್ಚ್ 31ಕ್ಕೆ ಅಂತ್ಯಗೊಂಡಂತೆ ಸಂಸ್ಥೆಯು 1,53,794 ಸದಸ್ಯರನ್ನು ಹೊಂದಿದ್ದು, ₹545.57 ಕೋಟಿ ಒಟ್ಟು ನಿಧಿಗಳೊಂದಿಗೆ ಸದೃಢ ಆರ್ಥಿಕ ಬುನಾದಿಯನ್ನು ಹೊಂದಿದೆ. ಸಂಸ್ಥೆಯ ದೀರ್ಘಾವಧಿ ಸಾಲದ ರೇಟಿಂಗ್ ‘CRISIL A (ಸ್ಥಿರ)’ ಎಂದು ಮರುನಿಗದಿಯಾಗಿದೆ. ರೈತಪರ ಯೋಜನೆಗಳು, ಡಿಜಿಟಲ್ ತಂತ್ರಜ್ಞಾನ ಮತ್ತು ವ್ಯವಹಾರ ವಿಸ್ತರಣೆಯೊಂದಿಗೆ ಮುನ್ನಡೆಯುತ್ತಿರುವ ಕ್ಯಾಂಪ್ಕೊ, ಬೆಳೆಗಾರರ ಏಳಿಗೆಗೆ ಪ್ರಥಮ ಆದ್ಯತೆ ನೀಡಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು