11:28 AM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ

ಇತ್ತೀಚಿನ ಸುದ್ದಿ

ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ ಘೋಷಣೆ

06/03/2026, 11:22

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ಧರಾಮಯ್ಯ 2026-27ನೇ ಸಾಲಿನ ಬಹುನಿರೀಕ್ಷೆಯ ಕರ್ನಾಟಕ ಬಜೆಟ್‌ ಮಂಡಿಸುತ್ತಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದೆ. ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, 2026-27ನೇ ಸಾಲಿನ ಅಯವ್ಯಯ ಮಂಡಿಸಲು ಖುಷಿ ಆಗುತ್ತಿದೆ. ನಮ್ಮ ಸರ್ಕಾರವು ಕೋಟ್ಯಾಂತರ ಕುಟುಂಬಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ. ರಾಜ್ಯದಲ್ಲಿ ಗ್ಯಾರಂಟಿ ಮೂಲಕ ದೊಡ್ಡ ಸಾಧನೆ ಮಾಡಿದ್ದೇವೆ ಎಂದರು ಹೇಳಿದ್ದಾರೆ.
ಕರ್ನಾಟಕದ 50 ಕ್ಕೂ ಹೆಚ್ಚು ಉತ್ಪನ್ನಗಳಿಗೆ GI ಮಾನ್ಯತೆ ನೀಡಲಾಗುವುದು. ರಾಜ್ಯದ ಒಟ್ಟು ಸಾಲ 8 ಲಕ್ಷ 24 ಸಾವಿರ 389 ಕೋಟಿ ರೂ. ಇದೆ ಎಂದು ತಿಳಿಸಿದ್ದಾರೆ.
ದಲಿತ ಕವಿ ಸಿದ್ದಲಿಂಗಯ್ಯ ಹೆಸರಿನಲ್ಲಿ ಟ್ರಸ್ಟ್ ನಿರ್ಮಿಸಲಾಗುವುದು. ಈ ವರ್ಷ ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂ. ಇದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದಿಂದ 56 ಸರ್ಕಾರಿ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಲಾಗಿದೆ. ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು