12:54 PM Monday21 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

26/05/2025, 12:54

ಬೆಂಗಳೂರು(reporterkarnataka.com): ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ‌ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಜೊತೆಗೆ, ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಲ್ಲೂ ಮನವಿ ಮಾಡಿದ್ದಾರೆ.
ಜಿಲ್ಲೆಯಾದ್ಯಂತ ಬಿಟ್ಟುಬಿಡದೆ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನ ಕೂಡ ಬಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಪ್ರವಾಸಿ ತಾಣಗಳಲ್ಲಿ, ನದಿ – ಸಮುದ್ರ ಪಾತ್ರಗಳಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಬೇಕು ಎಂದು ಸಚಿವರು ತಿಳಿಸಿದ್ದಾರೆ. ‌
ಸಮುದ್ರ ಹಾಗೂ ನದಿ ತಟದಲ್ಲಿ ವಾಸಿಸುತ್ತಿರುವ ಜನರನ್ನು ಅಗತ್ಯಬಿದ್ದರೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸಬೇಕು. ಜನರ ಅನುಕೂಲಕ್ಕಾಗಿ ಕಾಳಜಿ ಕೇಂದ್ರಗಳನ್ನು ತೆಗೆಯಬೇಕು, ಏಳು ತಾಲೂಕು ಜನರ ಅನುಕೂಲಕ್ಕಾಗಿ ದಿನ 24 ಗಂಟೆ ಸಹಾಯವಾಣಿ ಕಾರ್ಯನಿರ್ವಹಿಸಬೇಕು ಎಂದು ಸಚಿವೆ ಹೆಬ್ಬಾಳಕರ್ ತಿಳಿಸಿದ್ದಾರೆ.
ಸಾರ್ವಜನಿಕರು ಸಹ ಎಚ್ಚರಿಕೆ ವಹಿಸಬೇಕು, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು