10:42 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ ಶಾಲೆ- ಪಿಯು ಕಾಲೇಜಿಗೆ ರಜೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

01/07/2026, 21:11

ಮಂಗಳೂರು(reporterkarnataka.com): ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಮಕ್ಕಳು ಸೇರಿದಂತೆ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಈ ನಡುವೆ ಜಿಲ್ಲಾಡಳಿತ ನಾಳೆ(ಗುರುವಾರ)ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿ, ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದೆ.
ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ‌. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇರುವಂತೆ ಮತ್ತು ವಿಪತ್ತು ನಿರ್ವಹಣೆಯನ್ನು ಚಾಚು ತಪ್ಪದೆ ನಿರ್ವಹಿಸುವಂತೆ ಆದೇಶಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು