10:57 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಅಭಾವ: ಬಿಜೆಪಿ ಸಂಸದ, ಶಾಸಕರ ನಿಯೋಗ ಮುಖ್ಯಮಂತ್ರಿ ಭೇಟಿ; ಮಧ್ಯ ಪ್ರವೇಶಕ್ಕೆ ಆಗ್ರಹ

01/08/2025, 18:53

ಬೆಂಗಳೂರು(repoeterkarnataka.com): ರಾಜ್ಯ ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವ ಸೃಷ್ಟಿಯಾಗಿದ್ದು ಜನಸಾಮಾನ್ಯರು, ಕೂಲಿ ಕಾರ್ಮಿಕರು, ಸೇರಿದಂತೆ ಸಾರ್ವಜನಿಕರೆಲ್ಲರಿಗೂ ತೀವ್ರ ತೊಂದರೆಯುಂಟಾಗಿದ್ದು ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು.
ಕೆಂಪು ಕಲ್ಲು ಮತ್ತು ಮರಳಿನ ಪೂರೈಕೆಯಲ್ಲಿ ತೀವ್ರ ಅಭಾವವುಂಟಾಗಿದ್ದರಿಂದಾಗಿ ಜಿಲ್ಲೆಯಲ್ಲಿ ಸಾಮಾನ್ಯ ಜನರ ಗೃಹ ನಿರ್ಮಾಣ ಸೇರಿದಂತೆ ಯಾವುದೇ ರೀತಿಯ ಕಾಮಗಾರಿಗಳು ಸ್ಥಗಿತಗೊಂಡಿದೆ. ಇದು ನಮ್ಮ ಜಿಲ್ಲೆಯ ಆರ್ಥಿಕತೆಗೂ ಹೊಡೆತ ನೀಡಿದ್ದು, ಸಾವಿರಾರು ಕಾರ್ಮಿಕರ ಬದುಕು ದುಸ್ತರಗೊಂಡಿದೆ. ಹಾಗಾಗಿ ಕೂಡಲೇ ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸುವಂತೆ ನಮ್ಮೆಲ್ಲರ ಆಗ್ರಹವಾಗಿದೆ.

ಇದೇ ಸಂದರ್ಭದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಹಿರಿಯ ಐಎಎಸ್ ಅಧಿಕಾರಿ ಸಮೀರ್ ಶುಕ್ಲಾ ರವರನ್ನು ಸಹ ಭೇಟಿ ಮಾಡಿ ಜಿಲ್ಲೆಯಲ್ಲಿ ಜನಸಾಮಾನ್ಯರು ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ವಿವರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಸೇರಿದಂತೆ ಶಾಸಕರುಗಳು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಮಾಧ್ಯಮ ಪ್ರಕೋಷ್ಠದ ಸಂಚಾಲಕ ವಸಂತ ಜೆ.ಪೂಜಾರಿ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು