8:13 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

30/11/2025, 20:42

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಜಂಬರ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ 3 ಲಕ್ಷಕ್ಕೂ ಹೆಚ್ಚಿದೆ. 1882 ನೇ ಗೆಜೆಟ್ ಬಂದಾಗ ಸಕಲೇಶಪುರದಲ್ಲಿದ್ದು, ಬರಗಾಲದ ಸಂದರ್ಭದಲ್ಲಿ ಹೇಮಾವತಿ ನದಿ ಬತ್ತಿದಾಗ ಪಕ್ಕದ ಜಿಲ್ಲೆ ಸುಳ್ಯಕ್ಕೆ ಬಂದು ನೆಲೆಯೂರುತ್ತಾರೆ. ತುಳು, ಕೊಂಕಣಿ ಜೊತೆಗೆ ಕನ್ನಡ ಸೇರಿ ಅರೆಭಾಷೆಯಾಗಿದೆ. ಹೋಗುತ್ತೇನೆ ಎನ್ನುವುದು ವೋನೆ , ಬರುತ್ತೇನೆ ಎನ್ನುವುದು ಬನೇ ಎಂದು ಹೇಳುತ್ತಾರೆ. ಹೀಗೆ ಕೆಲವು ಅಕ್ಷರಗಳು ಬಿಟ್ಟುಹೋಗಿ ಅರೆಭಾಷೆಯಾಗಿದೆ ಎಂದರು. ಮೂಲತ: ಗೌಡ ಸಮುದಾಯಕ್ಕೆ ಸೇರಿರುವ ಇವರನ್ನು ಅರೆಭಾಷೆ ಗೌಡರು ಎನ್ನುತ್ತಾರೆ. ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿಯಾಗಿದೆ ಎಂದರು.
ಅರೆಭಾಷಿಕರಾಗಿದ್ದ ಕುರುಂಜಿ ವೆಂಕಟರಮಣಗೌಡರು, ನನಗೆ ಪರಿಚಿತರು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿ 230 ಸಣ್ಣ ಭಾಷೆಗಳಿವೆ. ಇವೆಲ್ಲವೂ ಕನ್ನಡದಿಂದಲೇ ಹುಟ್ಟಿದ್ದು, ಅರೆಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಅಕಾಡೆಮಿ ಮಾಡಲಿ ಎಂದರು.
ಭಾಗಮಂಡಲದಲ್ಲಿ ನಾಡಗೌಡ ಸಮುದಾಯಕ್ಕೆ ಒಂದು ಕೋಟಿ ರೂ.ಗಳನ್ನು ಹಿಂದೆ ಒದಗಿಸಲಾಗಿತ್ತು. ಪ್ರಸ್ತುತ 50 ಲಕ್ಷ ರೂ.ಬೇಡಿಕೆಯನ್ನು ಈಡೇರಿಸಲಾಗುವುದು. ಇತರೆ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.


ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆ ಇದ್ದು, ಇದನ್ನು ಈಡೇರಿಸಲಾಗುವುದು ಎಂದು ಭರವಸೆಯಿತ್ತರು.
ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿಗೆ ಭಾಜನರಾದ ಕೆ.ಆರ್.ಗಂಡಾಧಾರ, ಯು. ಪಿ.ಶಿವಾನಂದ ಹಾಗೂ ಡಿ.ಎಸ್.ಆನಂದ ಅವರಿಗೆ ಸರ್ಕಾರದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು