ಇತ್ತೀಚಿನ ಸುದ್ದಿ
ರೆಖ್ಯಾ ದರೋಡೆ ಪ್ರಕರಣ: 5 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
14/02/2026, 17:17
ಬೆಳ್ತಂಗಡಿ(reporterkarnataka.com): ರೆಖ್ಯಾ ಎಂಬಲ್ಲಿ ನಡೆದ ದರೋಡೆ ಪ್ರಕರಣಕ್ಕೆ5 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಸಂಬಂಧಿಸಿದಂತೆ 5 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
2017, ಏಪ್ರಿಲ್ 8ರಂದು ರೆಖ್ಯಾ ಎಂಬಲ್ಲಿ ನಡೆದ ದರೋಡೆ ಪ್ರಕರಣದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರಿನ ಮಾಗಡಿ ನಿವಾಸಿ ನಂಜುಂಡ ಎಂಬಾತನನ್ನು ಬೆಂಗಳೂರು ಗಿಡ್ಡೆನಹಳ್ಳಿ ಎಂಬಲ್ಲಿಂದ ಫೆ. 13ರಂದು ದಸ್ತಗಿರಿ ಮಾಡಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ಬ ನ್ಯಾಯಾಂಗ ಬಂಧನ ವಿಧಿಸಲಾಗಿದೆ.












