ಇತ್ತೀಚಿನ ಸುದ್ದಿ
ವಿವಿಧ ಕಾಮಗಾರಿಗಳಿಗೆ ಅನುದಾನ ಬಿಡುಗಡೆ: ಲೋಕೋಪಯೋಗಿ ಸಚಿವರಿಗೆ ಶಾಸಕ ಮಂಜುನಾಥ ಭಂಡಾರಿ ಮನವಿ
19/02/2025, 12:27

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ನಡೆಸಿದ ಲೋಕೋಪಯೋಗಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಸಂಬಂಧಿಸಿದಂತೆ ಇಲಾಖಾ ಪ್ರಗತಿ ಪರಿಶೀಲನ ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಭಾಗವಹಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಗಿತವಾಗಿರುವ ಸಂಪರ್ಕ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸುವ ಬಗ್ಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಲೋಕೋಪಯೋಗಿ ಇಲಾಖೆ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡುವಂತೆ ಸಚಿವರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ,ಶಾಸಕರಾದ ವೇದವ್ಯಾಸ ಕಾನತ್, ಡಾ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಭಾಗೀರಥಿ ಮುರುಳ್ಯ, ಅಶೋಕ್ ಕುಮಾರ್ ರೈ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.