ಇತ್ತೀಚಿನ ಸುದ್ದಿ
ರೆಮೆಡಿಸಿವರ್ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ; ಬೆಳಗಾವಿ ಜಿಲ್ಲಾಧಿಕಾರಿ ಎಚ್ಚರಿಕೆ
26/05/2021, 07:06
ಅಥಣಿ(reporterkarnataka news): ರೆಮೆಡಿಸಿವರ್ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ಜಿಲ್ಲಾಧಿಕಾರಿಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದ್ದಾರೆ.
ಅಥಣಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗ ಸಾಕಷ್ಟು ರೆಮೆಡಿಸಿವರ್ ಚುಚ್ಚುಮದ್ದು ಲಭ್ಯವಿದೆ. ಕಾಳಸಂತೆಯಲ್ಲಿ ಮಾರಾಟ ಮಾಡುವ ಬಗ್ಗೆ ಯಾವುದೇ ಸಾಕ್ಷ್ಮಾಧಾರ ದೊರಕಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಕೊರೊನಾ ರೋಗಿಗಳ ಸಂಬಂಧಿಕರಿಗೆ ಊಟ ಕೊಡುವ ನೆಪದಲ್ಲಿ ಆಸ್ಪತ್ರೆಯೊಳಗೆ ಪ್ರವೇಶಿಸಲು ಅವಕಾಶ ನೀಡುವುದಿಲ್ಲ. ಅವರು ಊಟ ಕೊಡಲು ಆಸ್ಪತ್ರೆಯೊಳಗೆ ಹೋದರೆ ಸೋಂಕು ಅವರ ಜತೆ ಮನೆ ಮಂದಿಗೆ ಹರಡುವ ಸಾಧ್ಯತೆಯಿದೆ. ಊಟವನ್ನು ಆಸ್ಪತ್ರೆಯ ಹೊರಭಾಗದಲ್ಲಿರುವ ಆಸ್ಪತ್ರೆ ಸಿಬ್ಬಂದಿಗಳಿಗೆ ಒಪ್ಪಿಸಬೇಕು. ಅವರು ರೋಗಿಗಳಿಗೆ ತಲುಪಿಸುವ ಕಾರ್ಯ ಮಾಡುತ್ತಾರೆ ಎಂದು ಜಿಲ್ಲಾಧಿಕಾರಿ ನುಡಿದರು.