7:49 AM Friday24 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನವೀಕರಣ, ಬ್ರಹ್ಮಕಲಶೋತ್ಸವ ಹಾಗೂ ನೂತನ ರಥ ಸಮರ್ಪಣೆ

29/05/2025, 23:04

ಬಂಟ್ವಾಳ(reporterkarnataka.com):ಪರಿಶುದ್ದ ಮನಸ್ಸಿನಿಂದ ಪ್ರಾರ್ಥಿಸಿದಾಗ ಭಗವಂತನ ಸಾಕ್ಷತ್ಕಾರವಾಗುವುದು.
ಮನಸ್ಸು ಶುದ್ಧೀಕರಣದಿಂದ್ದಾಗ ಉತ್ತಮ ಸಮಾಜವು ನಿರ್ಮಾಣವಾಗುವುದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಅಗ್ರಹಾರ ಬೀದಿ ಶ್ರೀಗೋಪಾಲಕೃಷ್ಣ ದೇವಸ್ಥಾನದ ನವೀಕರಣ, ಬ್ರಹ್ಮಕಲಶೋತ್ಸವ ಹಾಗೂ ನೂತನ ರಥ ಸಮರ್ಪಣೆಯ ಪ್ರಯುಕ್ತ ಬುಧವಾರ ರಾತ್ರಿ ನಡೆದ ಮೊದಲ ದಿನದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಮನುಷ್ಯರ ಮಧ್ಯೆ ಪ್ರೀತಿ,ವಿಶ್ವಾಸ,ನಂಬಿಕೆ ಮುಖ್ಯವಾಗಿದೆ ಎಂದರು.
ದೇವಳದ ಬ್ರಹ್ಮಕಲಶೋತ್ಸವ ಸಮಿತಿ‌ ಅಧ್ಯಕ್ಷ ರಾಕೇಶ್ ಮಲ್ಲಿ ಸಭಾಧ್ಯಕ್ಷತೆ ವಹಿಸಿದ್ದರು.
ನಾವೂರು ಗ್ರಾಪಂ ಅಧ್ಯಕ್ಷೆ ಇಂದಿರಾ,
ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪದ್ಮಶೇಖರ ಜೈನ್ ಬಲ್ಲೋಡಿಗುತ್ತು, ಬ್ರಹ್ಮಕಲಶೋತ್ಸವ ಸಮಿತಿ‌ ಗೌರವಾಧ್ಯಕ್ಷ ಸತೀಶ್ ಭಂಡಾರಿ ಕುಳತ್ತಬೆಟ್ಟು,ಬಂಟ್ವಾಳ ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಉದ್ಯಮಿ ವಾಸುದೇವ ಭಟ್ ಕುಂಜಿತ್ತೂಡಿ, ನಾವೂರು ಪ್ರಾ.ಆ.ಕೇಂದ್ರದ ವೈದ್ಯರಾದ ಡಾ.ಜೀವನ್ ಶೆಟ್ಟಿ ಅವರು ಅತಿಥಿಗಳಾಗಿ ಭಾಗವಹಿಸಿದ್ದರು.
ಇದೇ ವೇಳೆ ಗುತ್ತಿಗೆದಾರ ಸೀತಾರಾಮ್ ಸಾಲಿಯಾನ್ ಅವರನ್ನು ಸನ್ಮಾನಿಸಲಾಯಿತು.
ದೇವಸ್ಥಾನದ ಪ್ರಧಾನಾರ್ಚಕರಾದ ವೇ.ಮೂ.ಸುದರ್ಶನ್ ಬಲ್ಲಾಳ್ ಪ್ರಸ್ತಾವಿಸಿ, ಸ್ವಾಗತಿಸಿದರು. ಸದಾನಂದ ಗೌಡ ನಾವೂರು ವಂದಿಸಿದರು. ರಾಜೇಶ್ ಕೊಟ್ಟಾರಿ, ಹರ್ಷರಾಜ್ ಕಾರ್ಯಕ್ರಮ ನಿರೂಪಿಸಿದರು.
*ದೇವರ ಪ್ರತಿಷ್ಠೆ:*
ಗುರುವಾರ ಬೆಳಿಗ್ಗೆ ದೇವಸ್ಥಾನದಲ್ಲಿ ಶ್ರೀ ಅಂಜನೇಯ ಹಾಗೂ ಶ್ರೀಸೋಮನಾಥೇಶ್ವರ ದೇವರ ಪ್ರತಿಷ್ಠೆ, ಶ್ರೀಗೋಪಾಲಕೃಷ್ಣ ದೇವರಿಗೆ ತತ್ಪಹೋಮ, ತತ್ಪಕಲಶಾಭಿಷೇಕ, ಬ್ರಹ್ಮಕಲಶ ಂಮಡಲ, ಬ್ರಹ್ಮರಥ ಸಮರ್ಪಣೆಯ ವೈದಿಕ ವಿಧಿವಿಧಾನಗಳು ಎಡಪದವು ನಾರಾಯಣ ತಂತ್ರಿಗಳ ನೇತೃತ್ವ ದೇವಳದ ಪ್ರಧಾನ ಅರ್ಚಕರಾದ ವೇ.ಮೂ.ಸುದರ್ಶನ್ ಬಲ್ಲಾಳ್ ಪೌರೋಹಿತ್ಯದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ‌ ಗೌರವಾಧ್ಯಕ್ಷ ಸತೀಶ್ ಭಂಡಾರಿ ಕುಳತ್ತಬೆಟ್ಟು, ಅಧ್ಯಕ್ಷ ರಾಕೇಶ್ ಮಲ್ಲಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್, ಸಜೀಪ ಮಾಗಣೆ ತಂತ್ರಿಗಳಾದ ಎಂ.ಸುಬ್ರಹ್ಮಣ್ಯ ಭಟ್, ಸಂಪತ್ ಕುಮಾರ್ ಶೆಟ್ಟಿ,ಸೀತಾರಾಮ ಸಾಲಿಯಾನ್ ಬೀದಿ, ಶ್ರೀ.ಕ್ಷೇ.ಧ.ಗ್ರಾ.ಯೋ.ಯ ಯೋಜನಾಧಿಕಾರಿ ಜಯಾನಂದ ಪಿ.,ಲೋಕನಾಥ ಶೆಟ್ಟಿ ಪಿ.ಸದಾನಂದ ಹಳೇಗೇಟು ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು