5:23 AM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ರೇಣುಕಾಚಾರ್ಯ, ಪ್ರತಾಪ್ ಸಿಂಹ ವಿರುದ್ಧದ 4 ಕೇಸ್‌ ವಾಪಸ್‌:  ಸರಕಾರದ ವಿರುದ್ಧ  ಹೈಕೋರ್ಟ್‌ ಗರಂ

09/03/2022, 08:52

ಬೆಂಗಳೂರು(reporterkarnataka.com): ಬಿಜೆಪಿಯ ಇಬ್ಬರು ಜನಪ್ರತಿನಿಧಿಗಳ ವಿರುದ್ಧದ ನಾಲ್ಕು ಪ್ರಕರಣಗಳನ್ನು ಹಿಂಪಡೆದಿರುವುದಾಗಿ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

2020ರ ಸೆಪ್ಟೆಂಬರ್ 16ರ ನಂತರ ಬಿಜೆಪಿಯ ಇಬ್ಬರು ಜನಪ್ರತಿನಿಧಿಗಳ ನಾಲ್ಕು ಕೇಸ್‌ಗಳನ್ನು ಹಿಂಪಡೆದಿರುವುದಾಗಿ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಸಂಸದ ಪ್ರತಾಪಸಿಂಹ ವಿರುದ್ಧದ ಒಂದು ಕೇಸ್, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವಿರುದ್ಧದ ಮೂರು ಪ್ರಕರಣಗಳನ್ನು ವಾಪಸ್ ಪಡೆದಿರುವುದಾಗಿ ಸರ್ಕಾರ ತಿಳಿಸಿದೆ.

ಇದಕ್ಕೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ಕೃಷ್ಣಕುಮಾರ್ ಅವರಿದ್ದ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಹೈಕೋರ್ಟ್ ಸಮ್ಮತಿಯಿಲ್ಲದೇ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವಂತಿಲ್ಲ ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಹೀಗಿದ್ದೂ ಹೇಗೆ ವಾಪಸ್ ಪಡೆದಿರಿ ಎಂದು ಪ್ರಶ್ನಿಸಿದೆ.ವಾಪಸ್ ಪಡೆದ ಪ್ರಕರಣಗಳ ಸಂಬಂಧ ವರದಿ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.‌ ಈ ಮಧ್ಯೆ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಅಂಕೋಲಾ ಕೋರ್ಟ್‌ಗೆ ಹಾಜರಾದ ಸಚಿವ ಆನಂದ ಸಿಂಗ್, ಮಾಜಿ ಸಚಿವ ಜನಾರ್ಧನ ರೆಡ್ಡಿ, ಶಾಸಕ ನಾಗೇಂದ್ರ ಸೇರಿ ಏಳು ಜನ ಜಾಮೀನು ಪಡೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು